ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ: ಸಚಿವ ಮಧು ಬಂಗಾರಪ್ಪ
ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಧ್ಯಮದಲ್ಲಿ ಇದನ್ನು ತೊರಿಸುತ್ತಿದ್ದಾರೆ. ಯಾವುದನ್ನು ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ. ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ಹೇಳಿದ್ದಾರೆ.
ಶಿವಮೊಗ್ಗ (ಡಿ.01): ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಧ್ಯಮದಲ್ಲಿ ಇದನ್ನು ತೊರಿಸುತ್ತಿದ್ದಾರೆ. ಯಾವುದನ್ನು ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ. ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ಹೇಳಿದ್ದಾರೆ. ಸಾಗರದಲ್ಲಿ ಅವರು ಸುಧ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ರಕ್ಷಣೆ ಕೊಡಲು ನಾವು ಮಾತನಾಡಿದ್ದೇವೆ. ಇದನ್ನು ಹಗುರವಾಗಿ ತೆಗೆದುಕೊಳ್ಳುವ ಮಾತಿಲ್ಲ. ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ.
ನಮ್ಮ ಮೇಲೆ ವಿಶ್ವಾಸ ಇಡಬೇಕು. ಯಾರು ಈ ಮೇಲ್ ಕಳಿಸಿದ್ದಾರೆ ಅವರನ್ನು ಬಿಡುವ ಪ್ರಶ್ನೆ ಇಲ್ಲ. ಪೋಷಕರು ಧೈರ್ಯವಾಗಿರಬೇಕು ಎಂದರು. ನನ್ನ ಇಲಾಖೆ ಬಗ್ಗೆ ನಾನು ಮುತುವರ್ಜಿ ವಹಿಸಿದ್ದೇನೆ. ಮಕ್ಕಳಿಗೆ ಶಾಲೆಗಳಿಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ. ಡಿಸಿಎಂ ಅವರು ಸಹ ಶಾಲೆಗೆ ಭೇಟಿ ನೀಡಲಿದ್ದಾರೆ. ನಾನು ಸಹ ಸಂಜೆ ಬೆಂಗಳೂರಿಗೆ ಹೋಗುತ್ತೇನೆ. ಈಗಾಗಲೇ ಅಧಿಕಾರಿಗಳ ಜೊತೆ ಮಾಹಿತಿ ತಗೊಂಡಿದ್ದೇನೆ. ಗೃಹ ಸಚಿವರು ಸಹ ಕರ್ತವ್ಯ ಮಾಡುತ್ತಿದ್ದಾರೆ. ಅವರ ಜೊತೆ ನಾನು ಸಂಪರ್ಕದಲ್ಲಿದ್ದೇನೆ.
ಖಂಡಿತ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಬರುತ್ತಾರೆ: ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್
ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ ಎಂದರು. ಬಂದಿರುವ ಇ-ಮೇಲ್ ನೋಡೋಕೆ ಫೇಕ್ ತರಾ ಆಗಿ ಕಾಣುತ್ತಿದೆ. ಈ ಬಗ್ಗೆ ಮಾಹಿತಿ ತಗೋತಿದ್ದೇನೆ. ಪೋಷಕರು ಗಾಬರಿ ಆಗಿದ್ದಾರೆ. ಹಾಗಾಗಿ ಸುಮ್ಮನೆ ಇರಲು ಸಾಧ್ಯವಿಲ್ಲ. ಗೃಹ ಇಲಾಖೆಯು ಅವರ ಕೆಲಸ ಮಾಡುತ್ತಿದೆ. ನಾನು ಸಹ ಬೆಂಗಳೂರಿಗೆ ಹೋಗುತ್ತಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.
ಪೋಷಕರು ಮಕ್ಕಳು ಆತಂಕಪಡುವುದು ಬೇಡ: ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಂಡರು. ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ವಾಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು, ಶಾಲಾ ಸುತ್ತಮುತ್ತ ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದರು. ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಮಾಹಿತಿ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ.
ನಾರಾಯಣಮೂರ್ತಿ, ಮೋದಿ ಬದುಕುವುದಕ್ಕಾಗಿ ಗ್ಯಾರಂಟಿ ಯೋಜನೆ ನೀಡಿಲ್ಲ: ಸಚಿವ ತಂಗಡಗಿ
ಕಳೆದ ವರ್ಷವು ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕಪಡುವುದು ಬೇಡ ಎಂದರು.