ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ವಲ್ಪದರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. 

ತುಮಕೂರು(ಡಿ.28): ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ(ಬುಧವಾರ) ರಾತ್ರಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ವಲ್ಪದರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. 

ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವು, ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು ಕಾರು ಅಪಘಾತದಲ್ಲಿ ನಿಧನ!

ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು, ಈ ವೇಳೆ ಲಾರಿ ಚಾಲಕ ಕಾರನ್ನು ಉಜ್ಜಿಕೊಂಡು ಹೋಗಿದ್ದಾನೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಸಚಿವ ಮಧು ಬಂಗಾರಪ್ಪ ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.