Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ಏನು ನಡ್ತೀದೆ? 'ಬಿಜೆಪಿ ಸಂಸದರನ್ನು ಗೆಲ್ಲಿಸಿ' ಎಂದ ಶಾಮನೂರು ಪರ ಎಂಬಿ ಪಾಟೀಲ್ ಬ್ಯಾಟಿಂಗ್!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಕರೆ ನೀಡಿರುವುದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಶಿವಕುಮಾರ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ನಾಯಕರು ಶಾಮನೂರು ಶಿವಶಂಕರಪ್ಪರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನಡುವೆ ಇದೀಗ ಎಂಬಿ ಪಾಟೀಲ್ ಶಾಮನೂರು ಶಿವಶಂಕರಪ್ಪರ ಪರ ಬ್ಯಾಟ್ ಬೀಸಿರುವುದು ಕಾಂಗ್ರೆಸ್‌ನಲ್ಲಿ ಏನಾಗ್ತಿದೆ ಎಂದು ಕಾರ್ಯಕರ್ತರು ಗೊಂದಲಕ್ಕೀಡು ಮಾಡಿದೆ.

Minister MB Patil defended Shiv Shankarappas statement about MP BY Raghavendra at shivamogga rav
Author
First Published Jan 28, 2024, 3:06 PM IST

ವಿಜಯಪುರ (ಜ.28): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಕರೆ ನೀಡಿರುವುದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಶಿವಕುಮಾರ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ನಾಯಕರು ಶಾಮನೂರು ಶಿವಶಂಕರಪ್ಪರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನಡುವೆ ಇದೀಗ ಎಂಬಿ ಪಾಟೀಲ್ ಶಾಮನೂರು ಶಿವಶಂಕರಪ್ಪರ ಪರ ಬ್ಯಾಟ್ ಬೀಸಿರುವುದು ಕಾಂಗ್ರೆಸ್‌ನಲ್ಲಿ ಏನಾಗ್ತಿದೆ ಎಂದು ಕಾರ್ಯಕರ್ತರು ಗೊಂದಲಕ್ಕೀಡು ಮಾಡಿದೆ.

ಬಿಜೆಪಿ ಸಂಸದರ ಪರ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಎಂಬಿ ಪಾಟೀಲರು, ನೋಡಿ ಹಿರಿಯರಾಗಿ ಮಕ್ಕಳಿಗೆ ಆಶೀರ್ವಾದ ಮಾಡಿದ್ದಾರೆ. ಚುನಾವಣೆ ಬಂದಾಗ ಶಾಮನೂರು ಅವರು ಕಾಂಗ್ರೆಸ್ ಪರವಾಗಿ ನಿಲ್ತಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿಯೇ ಶಾಮನೂರು ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಸಂಸದರನ್ನು ಗೆಲ್ಲಿಸಿ ಎಂದ ಮಾತ್ರಕ್ಕೆ ಅವರು ಬಿಜೆಪಿಪರ ಎಂದು ಭಾವಿಸಬೇಕಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.

ಐಟಿ ಇಡಿ ದಾಳಿಗೆ ಹೆದರಿ ಜಗದೀಶ ಶೆಟ್ಟರ್ ಬಿಜೆಪಿಗೆ ಸೇರಿದ್ರಾ? ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಹೇಳಿದ್ದೇನು?

ಬಿಜೆಪಿ ಸಂಸದ ಬಿವೈ ರಾಘವೇಂದ್ರರ ಬಗ್ಗೆ ಶಾಮನೂರು ಶಿವಶಂಕರಪ್ಪನವರು ಹಾಡಿ ಹೊಗಳಿದಂತೆ ನನ್ನ ಬಗ್ಗೆಯೂ ಹಿಂದೆ ಬಿಎಸ್ ಯಡಿಯೂರಪ್ಪನವರು ಹೊಗಳಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಹಿರಿಯರಾಗಿ ಹೊಗಳ್ತಾರೆ. ಶಾಮನೂರ ಅವರಿಗೆ ವಯಸ್ಸಾಗಿದೆ ಏನೋ ಹೇಳಿದ್ದಾರೆ. ನೀವು ಸುಮ್ಮನೆ ದೊಡ್ಡದು ಮಾಡ್ತಿದ್ದೀರಾ. ಅವರ ಹೇಳಿಕೆ ಇಷ್ಟು ದೊಡ್ಡದು ಮಾಡಬೇಕಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ಬಿಜೆಪಿ ಸಂಸದರ ಪರ ಶಾಮನೂರು ಬ್ಯಾಟಿಂಗ್; ಸಚಿವ ಪ್ರಿಯಾಂಕ್ ಖರ್ಗೆ ಕೊಟ್ಟ ವಾರ್ನಿಂಗ್ ಏನು?

Follow Us:
Download App:
  • android
  • ios