Asianet Suvarna News Asianet Suvarna News

ಪ್ರಾಕೃತಿಕ ವಿಕೋಪ ತಡೆಗೆ ಅಗತ್ಯ ಕ್ರಮಕ್ಕೆ ಸಚಿವ ಎನ್‌ಎಸ್ ಬೋಸರಾಜ್ ಸೂಚನೆ

ಕೊಡುಗು ಜಿಲ್ಲೆಯಲ್ಲಿ ಯಾವುದೇ ಅವಘಢಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು ಸೂಚನೆ ನೀಡಿದ್ದಾರೆ. 

Minister ns bosaraju instructed to prevent natural calamities in kdp meeting kodagu rav
Author
First Published Jul 6, 2024, 8:41 PM IST

ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
 

ಕೊಡಗು (ಜು.6): ಕೊಡುಗು ಜಿಲ್ಲೆಯಲ್ಲಿ ಯಾವುದೇ ಅವಘಢಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು ಸೂಚನೆ ನೀಡಿದ್ದಾರೆ. 

ಕೊಡಗು(Kodagu) ಜಿಲ್ಲೆ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲದಲ್ಲಿ ಜಿಲ್ಲೆಯ ಜನರ ಹಾಗೂ ಪ್ರವಾಸಿಗರ ಯೋಗಕ್ಷೇಮಕ್ಕೆ ಮುಂಜಾಗ್ರತೆ ಕೈಗೊಳ್ಳಿ ಎಂದಿದ್ದಾರೆ. ಮಳೆಗಾಲದಲ್ಲಿ ಜಿಲ್ಲೆಯ ನಿವಾಸಿಗಳು ಹಾಗೂ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಅವಘಢಗಳು ಆಗದೆ ಇರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ “ಝೀರೋ ಕ್ಯಾಶುಯಲ್ಟಿ’ಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಿ ಎಂದು ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. 

ಕೊಡಗು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು, ಯಾವುದೇ ಅವಘಢಗಳು ಅಗದೇ ಇರುವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಕೊಡಗು ಜಿಲ್ಲಾಢಳಿತಕ್ಕೆ ಸೂಚನೆ ನೀಡಿದರು.  ಪ್ರಕೃತಿ ವಿಕೋಪ ಸಮರ್ಪಕ ನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಈ ಬಾರಿಯ ಮಳೆಗಾಲದಲ್ಲಿ ಆಗಬಹುದಾದ ಅವಘಡಗಳನ್ನು ಸಮರ್ಪಕವಾಗಿ ಹಾಗೂ ಕ್ಷಿಪ್ರವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. NDRF ತಂಡ ಈಗಾಗಲೇ ಜಿಲ್ಲೆಗೆ ಆಗಮಿಸಿದೆ. 33 ಜನರ ಈ ತಂಡ ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ಮಾಕ್ ಡ್ರಿಲ್ ಕೈಗೊಳ್ಳುತ್ತಿದೆ. ಜಿಲ್ಲಾಧಿಕಾರಿಗಳು ಅವಘಢಗಳು ಸಂಭವಿಸಬಹುದಾದ ಪ್ರದೇಶಗಳ ಮಾಹಿತಿಯನ್ನು ಕ್ರೋಢೀಕರಿಸಿ ತಂಡವನ್ನು ಸಜ್ಜಾಗಿಡಬೇಕು ಎಂದು ಸೂಚನೆ ನೀಡಿದರು.

ಚಾರ್ಮಾಡಿಘಾಟಿ ರಸ್ತೆಯುದ್ಧಕ್ಕೂ ಧುಮ್ಮಿಕ್ಕಿ ಹರಿಯೋ ಜಲಪಾತಗಳು ಹೊಸ ಲೋಕವನ್ನೇ ಸೃಷ್ಟಿಸಿದೆ

ಮಳೆಯ ಪ್ರಮಾಣ ಶೇಕಡಾ 4 ರಷ್ಟು ಕಡಿಮೆ:

ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 4 ರಷ್ಟು ಕಡಿಮೆ ಮಳೆ ವರದಿಯಾಗಿದೆ. ಜನವರಿಯಿಂದ ಜೂನ್ ತಿಂಗಳವರೆಗೆ ಸಾಧಾರಣ ಮಳೆ ವರದಿಯಾಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆ ವರದಿಯಾಗಿದ್ದು, ಹೆಚ್ಚಿನ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದಕ್ಕೆ ಅಧಿಕಾರಿಗಳು ಸಜ್ಜಾಗಬೇಕು. ತಾಲ್ಲೂಕುವಾರು ಟಾಸ್ಕ್ ಫೋರ್ಸ್ ಗಳನ್ನು ರಚಿಸಿ ಅಗತ್ಯ ಸಾಮಗ್ರಿಗಳನ್ನು ಹಾಗೂ ಅಂಕಿ ಅಂಶಗಳನ್ನು ಕ್ರೋಢೀಕರಿಸುವ ಕಾರ್ಯವನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. 

ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸಿ:

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಹರಾಷ್ಟ್ರದಲ್ಲಿ ನೀರಿಗೆ ಸಿಲುಕಿ ಕುಟುಂಬ ಸಾವಿಗೀಡಾದ ಘಟನೆಯಂತೆ ನಮ್ಮ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಭವಿಸಬಾರದು. ಈ ಹಿನ್ನಲೆಯಲ್ಲಿ ಪ್ರವಾಸಿಗರು ನೀರಿಗೆ ಇಳಿಯುವುದನ್ನ ನಿರ್ಬಂಧಿಸಬೇಕು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಪ್ರದೇಶಗಳಲ್ಲಿ ರಕ್ಷಣೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸಚಿವ ಎನ್ ಎಸ್ ಭೋಸರಾಜು ಸೂಚನೆ ನೀಡಿದರು. 

“ಝೀರೋ ಕ್ಯಾಶುಯಲ್ಟಿ ಪಾಲಿಸಿ” ಅಳವಡಿಸಿಕೊಳ್ಳಿ:

ಸೂಕ್ತ, ಸಮರ್ಪಕ ಹಾಗೂ ಕ್ಷಿಪ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ, ಈ ಬಾರಿಯ ಮಳೆಗಾಲದಲ್ಲಿ ಯಾವುದೇ ಕ್ಯಾಶುಯಲ್ಟಿ ಸಂಭವಿಸದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಜಿಲ್ಲೆಯ ನಿವಾಸಿಗಳು ಹಾಗೂ ಪ್ರವಾಸಿಗರು ಅವಘಡ ಗಳಿಗೆ ತುತ್ತಾಗದೆ ಇರುವಂತಹ ರೀತಿಯಲ್ಲಿ ಪರಿಸ್ಥಿತಿಯನ್ನು ನಿರ್ವಹಿಸುವ ಕ್ರಮಗಳನ್ನು ಅಳವಡಿಸಿಕೊಳ್ಳಿ ಎಂದು ಸೂಚನೆ ನೀಡಿದರು.

ಮುಡಾ ಹಗರಣವನ್ನ ಸಿಬಿಐಗೆ ವಹಿಸಲಿ; ಸಂಸದ ಯದುವೀರ್ ಒಡೆಯರ್ ಆಗ್ರಹ
 
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಶಾಸಕರಾದ ಮಂತರ್ ಗೌಡ, ಮೈಸೂರು ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಸಿಇಓ ವರ್ಣೀತ್ ನೇಗಿ ಸೇರಿದಂತೆ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios