ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿನಲ್ಲಿ ನಿರ್ಮಾಣವಾದರೆ ಉತ್ತರ ಕರ್ನಾಟಕದ 21 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಈಗಿರುವ ವಿಮಾನ ನಿಲ್ದಾಣಕ್ಕೂ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರು (ಜ.29): ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿನ ಭಾಗದಲ್ಲಿ ನಿರ್ಮಾಣವಾದರೆ ಉತ್ತರ ಕರ್ನಾಟಕ ಭಾಗದ 21 ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಈಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕವಾಗುತ್ತದೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ 2ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿಗೆ ನೀಡುವಂತೆ ಕೇಳುತ್ತಿದ್ದೇವೆ. ಇದೀಗ ತುಮಕೂರಿನ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಉತ್ತರ ಕರ್ನಾಟಕ ಭಾಗದ 21 ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಈಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ತುಮಕೂರುವರೆಗೆ ಮೆಟ್ರೋ ಯೋಜನೆ ಡಿಪಿಆರ್ ಇನ್ನು ಅಂತಿಮವಾಗಿಲ್ಲ. ಹೈದ್ರಾಬಾದ್ ಕಂಪನಿಗೆ ನೀಡಲಾಗಿದ್ದು ಡಿಪಿಆರ್ ವರದಿ ನೀಡಿಲ್ಲ. ವರದಿ ನೀಡಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ತದನಂತರ ಕೇಂದ್ರ ಸರ್ಕಾರದ ಅನುಮತಿ ಕೇಳುತ್ತೇವೆ ಎಂದು ಹೇಳಿದರು. 

ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ. ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಸಭೆ ಕರೆಯಲಾಗಿದೆ‌. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ಸಹಾಯವಾಣಿಯನ್ನು ಆರಂಭಿಸಲಾಗುವುದು. ಸಭೆಯಲ್ಲಿ ಅಂತಿಮವಾದರೆ ನಾಳೆ ಕ್ಯಾಬಿನೆಟ್ ಮುಂದೆ ತರುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿ ರಾಡಿ ತಿಳಿಗೊಳಿಸಲು ಹರಸಾಹಸ: ದಿಲ್ಲಿಗೆ ಬನ್ನಿ, ರಾಮುಲುಗೆ ಅಮಿತ್ ಶಾ ಬುಲಾವ್‌

ಸಿಎಂ ನೇಮಕ ಮಾಡುವುದು ಹೈಕಮಾಂಡ್. ಶಾಸಕರ ಅಭಿಪ್ರಾಯ ಕೇಳಬೇಕಿಲ್ಲ ಎಂದು ರಾಮನಗರ ಶಾಸಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಹೈಕಮಾಂಡ್ ಸೂಚನೆ ಶಾಸಕರಿಗು ಮತ್ತು ಮಂತ್ರಿಗಳಿಗು ಎಲ್ಲರಿಗೂ ಅನ್ವಯಯಾವಗುತ್ತದೆ. ಪಕ್ಷದಲ್ಲಿ ಯಾರು ಆ ರೀತಿ ಹೇಳಿಕೆ ಕೊಡಬಾರದು ಎಂದು ಹೈಕಮಾಂಡ್ ಸೂಚಿಸಿದ‌ ಮೇಲೆ ಎಲ್ಲರಿಗು ಅನ್ವಯವಾಗುತ್ತದೆ. ಅವರಿಗೂ ಹೈಕಮಾಂಡ್ ಮತ್ತೆ ಹೇಳುತ್ತಾರೆ. ಹೈಕಮಾಂಡ್ ಮತ್ತು ಶಾಸಕರು ಆಯ್ಕೆ ಮಾಡುತ್ತಾರೆ. ಮೊದಲು ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ಆನಂತರ ಅವರು ತೀರ್ಮಾನ ಮಾಡುತ್ತಾರೆ. ಬೆಂಬಲ ಸೇರಿದಂತೆ ಬೇರೆಬೇರೆ ವಿಚಾರಗಳನ್ನು ಆಧರಿಸಿ ಪ್ರಕಟಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು‌.