* ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ವಿಚಾರ* ಎಲ್ಲಾ ಗೊಂದಲಗಳಿಗೆ ತೆರೆ ಎಳೆದ  ಕಂದಾಯ ಸಚಿವ * ಈ ಬಗ್ಗೆ  ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ ಎಂದ  ಸಚಿವ ಆರ್ ಅಶೋಕ್ 

ಬೆಂಗಳೂರು, (ಆ.10): ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರುಗಳ ಮಧ್ಯೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ಖೇಲ್ ರತ್ನ ಪ್ರಶಸ್ತಿಗೆ ರಾಜೀವ್ ಗಾಂಧಿ ಬದಲಾಗಿ ಧ್ಯಾನ್ ಚಂದ್ ಅವರ ಹೆಸರು ಇಡಲಾಗಿದೆ. ಇದೀಗ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಕೂಗು ಎದ್ದಿದ್ದು, ಇದಕ್ಕೆ ಪರ-ವಿರೋಧ ಚರ್ಚೆಗಳು ಆಗುತ್ತಿವೆ.

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿಗೆ ಧ್ವನಿಗೂಡಿಸಿದ ಸಚಿವ ಸುಧಾಕರ್

ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಕಾಂಗ್ರೆಸ್ ನವರಿಗೆ ವಾಜಪೇಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇದು ಬಿಜೆಪಿ ಸರ್ಕಾರ ಯಾವುದೇ ಸರ್ಕಾರ ಬಂದರೂ ವ್ಯಕ್ತಿಯ ಹೆಸರಿಡುವ ಪದ್ಧತಿಯನ್ನು ಬಿಟ್ಟು ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಯೋಜನೆ ಅಂತ ಹೆಸರಿಡಬೇಕು. ಆಗ ಯಾವುದೇ ಸರ್ಕಾರ ಸಿಎಂ ಬಂದರೂ ಅದು ಮುಂದುವರೆಯುತ್ತದೆ ಎಂದರು.

ಈ ಮೊದಲ ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಸಹ ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆಯ ಚರ್ಚೆಗಳು ನಡೆದಿದ್ದವು. ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆಯ ಬಗ್ಗೆ ಧ್ವನಿ ಎತ್ತಿದ್ದರು. ಟ್ವಿಟ್ಟರ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು.