ಬೆಂಗಳೂರು (ಜೂ.07): ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಧಿಕಾರಾವಧಿಯಲ್ಲಿ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಹೋಟೆಲ್‌ಗಳಲ್ಲಿ ಕಿತ್ತಾಡಿದ್ದನ್ನು ನೋಡಿದ್ದೇವೆ. ಅಂತಹ ಘಟನೆಗಳು ನಮ್ಮ ಅಧಿಕಾರದಲ್ಲಿ ನಡೆದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಬಿಗಿ ಹಿಡಿತ ಇಲ್ಲದಿರುವುದರಿಂದ ಐಎಎಸ್‌ ಅಧಿಕಾರಿಗಳ ಕಿತ್ತಾಟ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು. 

ರಾಜ್ಯ ಬಿಜೆಪಿ ನಾಯಕರ ಮಿಟಿಂಗ್ ಅಂತ್ಯ: ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಅಶೋಕ್ ಮಾಹಿತಿ ..

ಕಾಂಗ್ರೆಸ್‌, ಜೆಡಿಎಸ್‌ ಅಧಿಕಾರಾವಧಿಯಲ್ಲಿ ಅಧಿಕಾರಿಗಳ ಮಧ್ಯೆ ಯಾವ ರೀತಿ ಕಿತ್ತಾಟ ಆಗಿದೆ ಎಂಬುದು ಎಲ್ಲರಿಗೂ ಗೊತ್ತು. ಅಂತಹದ್ದೇನೂ ಈಗ ನಡೆದಿಲ್ಲ. 

ಆಡಳಿತಕ್ಕೆ ಚುರುಕು ಮುಟ್ಟಿಸಲು ವಿವಾದಕ್ಕೀಡಾಗಿದ್ದ ಇಬ್ಬರೂ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಕಂದಾಯ ಸಚಿವನಾಗಿ ಇದನ್ನು ಸ್ವಾಗತಿಸುತ್ತೇನೆ ಎಂದರು.