ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ಬಿಜೆಪಿ ಅನಗತ್ಯ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿಂದೂಗಳಿಗೆ ಸೇರಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ನಿದ್ದೆ ಬರಲ್ಲ ಎಂದು ಕಿಡಿ

 ಚಿತ್ರದುರ್ಗ (ಆ.31): ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ವಿಚಾರದಲ್ಲಿ ಬಿಜೆಪಿ ಅನಗತ್ಯ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ‌ ರಾಮಲಿಂಗಾರೆಡ್ಡಿ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದು, ಅದು ಹಿಂದೂಗಳಿಗೆ ಸೇರಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ನಿದ್ದೆ ಬರಲ್ಲ. ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತ ಹೌದೋ, ಅಲ್ಲವೋ ಎಂಬುದನ್ನು ಕೋರ್ಟ್ ತೀರ್ಮಾನಿಸುತ್ತದೆ. ನಾಡಹಬ್ಬ ಏಳು ಕೋಟಿ ಜನರಿಗೆ ಸೇರಿರುವಂತಹ ಹಬ್ಬವಾಗಿದೆ. 

ಇದನ್ನೂ ಓದಿ: ರಾಜಕಾರಣಿಗಳು ಏನು ಬೇಕಾದರೂ ಹೇಳಲಿ, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು: ಪ್ರಮೋದಾದೇವಿ

ಬಿಎಸ್‌ವೈ ಕಾಲದಲ್ಲಿ ಅಬ್ದುಲ್ ಕಲಾಂರಿಗೆ ಅಹ್ವಾನಿಸಲಾಗಿತ್ತು. ಈ ಹಿಂದೆ ಕವಿ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು. ಆಗ ಬಿಜೆಪಿಗರು ಅವರಿಗೆ ಕುಂಕುಮ ಹಚ್ಚಿಕೊಂಡು ಬನ್ನಿ ಎಂದಿದ್ದರಾ? ಅವರವರ ಧರ್ಮ ಅವರವರಿಗೆ ಶ್ರೇಷ್ಠ. ಯಾವುದೇ ಧರ್ಮವನ್ನು ಯಾರೂ ದ್ವೇಷಿಸಬಾರದು. ಮತಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಗರಿಗೆ ಜನ ನೆಮ್ಮದಿಯಿಂದ ಇರುವುದು ಬೇಕಾಗಿಲ್ಲ. ಅವರದು ಬರೀ ಬೆಂಕಿ ಹಚ್ಚಿ ಬೇಳೆ ಕಾಳು ಬೇಯಿಸಿಕೊಳ್ಳುವ ಕೆಲಸವಾಗಿದೆ ಎಂದು ಕಿಡಿಕಾರಿದರು.

ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಿಎಂ, ಡಿಸಿಎಂ ಈಗಾಗಲೇ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಮಾಡಿಸಲು ನಿರ್ಧರಿಸಿದ್ದಾರೆ ಎಂದರು.