ವಿಧೇಯಕದಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ| ರೈತರು ಎಪಿಎಂಸಿ ಒಳಗೆ ಮತ್ತು ಹೊರಗಡೆಯೂ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಧೇಯಕದ ಮೂಲಕ ಅವಕಾಶ| ರಾಜ್ಯದ 27 ಜಿಲ್ಲೆಗಳಲ್ಲಿ ಸಭೆ ನಡೆಸಿ ತಿದ್ದುಪಡಿ ಕಾಯ್ದೆಯಿಂದಾಗುವ ಸಮಸ್ಯೆಗಳ ಕುರಿತು ಪರಿಶೀಲನೆ: ಎಸ್‌ಟಿಎಸ್|
ಬೆಂಗಳೂರು(ಡಿ.11): ವಿಧಾನಪರಿಷತ್‌ನಿಂದ ಅಂಗೀಕರಿಸಲ್ಪಟ್ಟ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕವನ್ನು ಸದನವು ಧ್ವನಿಮತ ಮೂಲಕ ಅಂಗೀಕರಿಸಿತು. ಗುರುವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ವಿಧೇಯಕವನ್ನು ಅಂಗೀಕರಿಸುವಂತೆ ಕೋರಿ ಒಪ್ಪಿಗೆ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಸೋಮಶೇಖರ್, ವಿಧೇಯಕದಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ. ರೈತರು ಎಪಿಎಂಸಿ ಒಳಗೆ ಮತ್ತು ಹೊರಗಡೆಯೂ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ.
'ಚಾಮರಾಜನಗರ ಉಸ್ತುವಾರಿಯೂ ಎಸ್‌ಟಿಎಸ್‌ಗೆ ನೀಡುವಂತೆ ಜನರ ಆಗ್ರಹ'
ರಾಜ್ಯದ 27 ಜಿಲ್ಲೆಗಳಲ್ಲಿ ಸಭೆ ನಡೆಸಿ ತಿದ್ದುಪಡಿ ಕಾಯ್ದೆಯಿಂದಾಗುವ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದ್ದೇನೆ. ಎಲ್ಲಿಯೂ ಸಮಸ್ಯೆ ಕಂಡುಬಂದಿಲ್ಲ ಎಂದು ಹೇಳಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 11, 2020, 7:05 AM IST