'ಇಂಥ ಘಟನೆಯಲ್ಲಿ ಯಾರೂ ರಾಜಕೀಯ ಮಾಡಬಾರದು'; ನಾಗಮಂಗಲ ಘಟನೆ ಖಂಡಿಸಿದ ಸಚಿವ ಸಂತೋಷ್ ಲಾಡ್

ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಗಲಾಟೆ ಆಗಿರುವುದು ನಿಜಕ್ಕೂ ಒಳ್ಳೆಯದಲ್ಲ. ಘಟನೆ ಸಂಬಂಧ ಗೃಹ ಸಚಿವರು ಇದಕ್ಕೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವ್ರ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

Minister santosh lad react about nagamangala muslim groups stone pelting during ganeshotsav mandya rav

ಧಾರವಾಡ (ಸೆ.12): ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಗಲಾಟೆ ಆಗಿರುವುದು ನಿಜಕ್ಕೂ ಒಳ್ಳೆಯದಲ್ಲ. ಘಟನೆ ಸಂಬಂಧ ಗೃಹ ಸಚಿವರು ಇದಕ್ಕೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವ್ರ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ನಾಯಕರ ಆರೋಪ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರು ಎಲ್ಲದಕ್ಕೂ ಆರೋಪ ಮಾಡ್ತಾರೆ. ರಾಜೀನಾಮೆ ಕೇಳ್ತಾರೆ. ರಾಜೀನಾಮೆ ಕೇಳೋದು ಬಿಜೆಪಿಗೆ ಒಂದು ಫ್ಯಾಷನ್ ಆಗಿದೆ. ನಾಗಮಂಗಲ ಗಲಾಟೆ ಪ್ರಕರಣದಲ್ಲಿ ಭಾಗಿಯಾದವರನ್ನು ಪೊಲೀಸರು ಈಗಾಗಲೆ ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುತ್ತೆ ಎಂದರು.

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಪ್ರಕರಣ; ಸರ್ಕಾರ, ಪೊಲೀಸರ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ಗರಂ

ಕೋಲ್ ಮೈನಿಂಗ್ ನಲ್ಲಿ ಹಲವು ಹಗರಣ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಪ್ರಲ್ಹಾದ್ ಜೋಶಿ ರಾಜೀನಾಮೆ ಕೊಡ್ತಾರಾ? ಸೆಬಿ ಹಗರಣದಲ್ಲಿ ಸರ್ಕಾರಿ ಅಧಿಕಾರಿಗಳ ಕೈವಾಡದ ಆರೋಪ ಇತ್ತು. ಇದಕ್ಕೆ ಹಣಕಾಸು ಸಚಿವರು ರಾಜೀನಾಮೆ ಕೊಡ್ತಾರಾ? ಸಣ್ಣ ಸಣ್ಣ ಗಲಾಟೆಗೆಲ್ಲ ರಾಜೀನಾಮೆ ಕೇಳಿದ್ರೆ ಹೇಗೆ? ಬಿಜೆಪಿಯವರ ಆರೋಪಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಆದರೆ ಘಟನೆಯನ್ನು ಖಂಡಿಸುತ್ತೇನೆ ಎಂದರು.

ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; ಇದೊಂದು ಆಕಸ್ಮಿಕ ಘಟನೆ ಎಂದ ಗೃಹ ಸಚಿವ!

ನಮ್ಮ ರಾಜ್ಯ ಅಲ್ಲ, ಎಲ್ಲಿಯೂ ಇಂತಹ ಘಟನೆ ಆಗಬಾರದು. ಹಿಂದೆಯೂ ಅದೇ ಸ್ಥಳದಲ್ಲಿ ಗಲಾಟೆ ಆಗಿದೆಯಲ್ಲ ಎಂಬ ಪ್ರಶ್ನೆಗೆ ಮುಂಜಾಗ್ರತಾ ತೆಗೆದುಕೊಂಡಾಗಲೂ ಇಂತಹ ಘಟನೆಗಳು ಆಗುವ ಸಾಧ್ಯತೆಗಳು ಇರುತ್ತವೆ. ಇಂತಹ ಘಟನೆಗಳಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು.

Latest Videos
Follow Us:
Download App:
  • android
  • ios