ಚಂದ್ರಯಾನ-3: ಪ್ರತಿಯೊಬ್ಬ ದೇಶವಾಸಿಗೂ ಹೆಮ್ಮೆಯ ಕ್ಷಣ, ಸಚಿವ ಸತೀಶ್ ಜಾರಕಿಹೊಳಿ
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ/ತುಮಕೂರು/ದಾವಣಗೆರೆ(ಆ.23): ಚಂದ್ರಯಾನ-3 ಯಶಸ್ವಿಯಾಗಿದ್ದು, ಪ್ರತಿಯೊಬ್ಬ ದೇಶವಾಸಿಗೂ ಇದೊಂದು ಹೆಮ್ಮೆಯ ಕ್ಷಣವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಇಸ್ರೋದ ಪರಿಶ್ರಮದಿಂದ ಚಂದ್ರಯಾನ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.
Chandrayaan 3: ಚಂದ್ರನ ನೆಲದ ಮೇಲೆ ಕಾಲಿಟ್ಟ ಬಳಿಕ ತೆಗೆದ ಮೊದಲ ಚಿತ್ರ!
ತುಮಕೂರಲ್ಲಿ ಪಟಾಕಿ ಸಿಡಿಸಿ ಸಂಭ್ರಮ
ತುಮಕೂರು: ಚಂದ್ರಯಾನ -3 ಉಡಾವಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ತುಮಕೂರು ನಗರದ ಟೌನ್ ಹಾಲ್ ಬಳಿಯಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದಾರೆ.
ಸ್ಪೂರ್ತಿ ಗ್ರೂಪ್ ಮಾಲೀಕ ಎಸ್.ಪಿ ಚಿದಾನಂದ್ ರಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಪಟ್ಟಿದ್ದಾರೆ.
ಇಸ್ರೋ ವಿಜ್ಞಾನಿಗಳ ಸಾಧನೆಗೆ ಚಿತ್ರಕಲಾ ಶಿಕ್ಷಕರಿಂದ ಗೌರವ
ಚಂದ್ರಯಾನ -3 ಉಡಾವಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಹಿರಿಯ ಚಿತ್ರಕಲಾ ಶಿಕ್ಷಕ, ಹಿರಿಯ ಕಲಾವಿದ ಶಾಂತಯ್ಯ ಪರಡಿಮಠ ಅವರು ಇಸ್ರೋ ವಿಜ್ಞಾನಿಗಳ ತಂಡವನ್ನ ಚಿತ್ರ ಬಿಡಿಸುವ ಮೂಲಕ ಗೌರವಿಸಿದ್ದಾರೆ.