Asianet Suvarna News Asianet Suvarna News

ಅಧಿಕಾರಿ ಸ್ವೀಕರಿಸಿದ ಮೊದಲ ಸಭೆಯಲ್ಲಿ ದೇವಸ್ಥಾನಗಳ ಬಗ್ಗೆ ಮಹತ್ವದ ಸೂಚನೆ ಕೊಟ್ಟ ಜೊಲ್ಲೆ

* ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ
* ವಿಧಾನಸೌಧದಲ್ಲಿ ನೂತನ ಕಚೇರಿ ಪೂಜೆ ನೆರವೇರಿಸಿ ಅಧಿಕಾರ ಸ್ವೀಕರಿಸಿದ ಶಶಿಕಲಾ ಜೊಲ್ಲೆ
* ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಸಭೆಯಲ್ಲಿ ಮಹತ್ವದ ಸೂಚನೆಗಳನ್ನ ನೀಡಿದ ಸಚಿವೆ  

Minister Shashikala Jolle Gives Some instructions to Officers Over Temples rbj
Author
Bengaluru, First Published Aug 18, 2021, 4:11 PM IST

ಬೆಂಗಳೂರು, (ಆ.18): ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು (ಆ.18) ಶಶಿಕಲಾ ಜೊಲ್ಲೆ ವಿಧಾನಸೌಧದಲ್ಲಿ ನೂತನ ಕಚೇರಿ ಪೂಜೆ ನೆರವೇರಿಸಿ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಮೊದಲ ಸಭೆಯಲ್ಲಿ ದೇವಾಲಯಗಳ ಆಸ್ತಿ ಸಮೀಕ್ಷೆಗೆ ಸೂಚನೆ ಕೊಟ್ಟಿದ್ದಾರೆ.

ಮುಜರಾಯಿ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ. ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ದೇವಸ್ಥಾನಗಳ ಮಾಹಿತಿ ಪಡೆದುಕೊಂಡು, ಆಸ್ತಿ ಎಷ್ಷಿದೆ ಎಂದು ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಹಿಳಾ ಖಾತೆ ಹಿಂಪಡೆದಿದ್ದಕ್ಕೆ : ಸಚಿವೆ ಶಶಿಕಲಾ ಜೊಲ್ಲೆ ಅತೃಪ್ತಿ

ಅಲ್ಲದೇ ಮಹಾರಾಷ್ಟ್ರದ ಪಂಡರಪುರ ಹಾಗೂ ತುಳಜಾಭವಾನಿ ದೇವಸ್ಥಾನದ ಬಳಿ ತಿರುಪತಿ ಮಾದರಿ ಯಾತ್ರಿ ನಿವಾಸ್ ನಿರ್ಮಾಣ ಮಾಡುವ ಕುರಿತು ಅಲ್ಲಿ ರಾಜ್ಯ ಸರ್ಕಾರದ ಜಮೀನು ಎಷ್ಟಿದೆ ಎನ್ನುವ ಮಾಹಿತಿ ಪಡೆಯುವಂತೆ ತಿಳಿಸಿದ್ದು,  ಆಂಧ್ರಪ್ರದೇಶದ ಶ್ರೀಶೈಲಂಗೆ ಭೇಟಿ ನೀಡಿ ಅಲ್ಲಿಯೂ ರಾಜ್ಯದ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಯಾತ್ರಿ ನಿವಾಸ ನಿರ್ಮಾಣ ಮಾಡುವ ಕುರಿತು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಹೇಳಿದರು.

ಅದೇ ರೀತಿ, ತಮಿಳುನಾಡು, ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸಗಳನ್ನು ತೆರೆಯುವ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಅಲ್ಲದೆ ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮುಜಾರಾಯಿ ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ಯೋಜನೆಗಳ ಮಾಹಿತಿ ಪಡೆದುಕೊಂಡರು. ರಾಜ್ಯದ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಬಳಿ ಭಕ್ತರಿಗೆ ವಸತಿಗಾಗಿ ಎಷ್ಟು ಯಾತ್ರಿ ನಿವಾಸಗಳಿವೆ. ರಾಜ್ಯದಲ್ಲಿ ಯಾವ ದೇವಸ್ಥಾನದ ವ್ಯಾಪ್ತಿಯಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲು ಅವಕಾಶ ಇದೆ ಎನ್ನುವ ಬಗ್ಗೆ ಸಂಪೂರ್ಣ ಅಗತ್ಯ ಮಾಹಿತಿ ನೀಡುವಂತೆ ಹೇಳಿದರು.

ಇನ್ನು ಕೊರೋನಾ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಂಪೂರ್ಣ ನಿಷೇಧ ಹೇರುವ ಬದಲು ನಿರ್ದಿಷ್ಟ ಭಕ್ತರನ್ನು ಹಂತ ಹಂತವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಯಾವ ಕ್ರಮ ಕೈಗೊಳ್ಳಬಹುದು ಎನ್ನುವುದನ್ನು ತಿಳಿದುಕೊಂಡು ಮಾಹಿತಿ ನೀಡುವಂತೆ ಸೂಚಿಸಿದರು.

ಸಪ್ತಪದಿ ಯೋಜನೆಗೆ ಹೆಚ್ಚು ಪ್ರಚಾರ 
ರಾಜ್ಯ ಸರ್ಕಾರದ ಮಹತ್ವದ ಸಾಮೂಹಿಕ ಮದುವೆ ಸಪ್ತಪದಿ ಯೋಜನೆ  ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಈ ಯೋಜನೆ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಈ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಯೋಜನೆ ಯಶಸ್ವಿಗೆ ಕ್ರಮ ಕೈಗೊಳ್ಳುಬೇಕು ಎಂದರು.

Follow Us:
Download App:
  • android
  • ios