ರಾಜು ತಾಳಿಕೋಟೆ ಸೇರಿದಂತೆ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ತಂಗಡಗಿ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. 

minister shivaraj tangadagi announced the appointment of directors for the 6 Rangayanas of karnataka gvd

ಬೆಂಗಳೂರು (ಆ.12): ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ನಿರ್ದೇಶಕರ ಪಟ್ಟಿ ಹೀಗಿದೆ:
1.ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು, 
2.ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .
3.ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.
4.ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ. 
5.ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.
6.ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ

ಬೆಂಗಳೂರು ವಿಶ್ವವಿದ್ಯಾಲಯ ಸಾಧನೆಗೆ ಮತ್ತೊಂದು ಗರಿ: NIRF ಶ್ರೇಯಾಂಕದಲ್ಲಿ 81ನೇ ಸ್ಥಾನ!

ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲ್ಯಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ  ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ತಂಗಡಗಿ ಹೇಳಿದರು.

Latest Videos
Follow Us:
Download App:
  • android
  • ios