ಹನ್ನೊಂದು ನಿಗಮಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ 

ಬೆಂಗಳೂರು(ಜೂ.17): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಹನ್ನೊಂದು ನಿಗಮಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ತಕ್ಷಣದಿಂದ ಜಾರಿಗೆ ಬರುವಂತೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ.

ಕಾಂಗ್ರೆಸ್‌ ಸರ್ಕಾರ ಕೊಟ್ಟಮಾತಿನಂತೆ ನಡೆದಿದೆ: ಸಚಿವ ಶಿವರಾಜ ತಂಗಡಗಿ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ದಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ದಿ ನಿಗಮ, ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.