ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು 'ಶುಭವಾಗಲಿ' ಎಂದು ಬರೆಯುವಾಗ 'ಶಬವಾಗಲಿ' ಎಂದು ಬರೆದಿದ್ದ ವಿಡಿಯೋ ವೈರಲ್ ಆಗಿತ್ತು. ತಂಗಡಗಿ ಅವರು ತಮ್ಮ ಬಿಎಸ್ಸಿ ಪದವಿ ಹಿನ್ನೆಲೆಯನ್ನು ಉಲ್ಲೇಖಿಸಿ, ಕನ್ನಡ ಬರೆಯಲು ಬಾರದಷ್ಟು ದಡ್ಡರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಕೊಪ್ಪಳ (ಫೆ.6): ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೋಲ್ಲ ಅನ್ನೋ‌ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೇ ಇರುವಷ್ಟು ದಡ್ಡ ನಾನಲ್ಲ. ಪೂರ್ತಿ ಬರೆಯುವವರೆಗೂ ಕಾಯುವ ತಾಳ್ಮೆ ಇಲ್ಲದವರು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಕಾರಟಗಿ ಶಾಲೆಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಬೋರ್ಡ್‌ ಮೇಲೆ ಶುಭವಾಗಲಿ ಎಂದು ತರೆಯಲು ತಡಬಡಾಯಿಸಿ ಶಬವಾಗಲಿ ಎಂದು ಬರೆದಿದ್ದು. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿತ್ತು.

ನಾನು ಬೇರೆ ಏನೋ ಬರೆಯಲು ಮುಂದಾಗಿದ್ದೆ. ಆದರೆ, ಅಲ್ಲಿದ್ದವರು ಶುಭವಾಗಲಿ ಅಂತ ಬರೆಯಲು ಹೇಳಿದರು. ಆಗ ಭ ಅಕ್ಷರದಲ್ಲಿ ಸ್ವಲ್ಪ ತಪ್ಪಾಗಿತ್ತು. ಆದರೆ, ಅಕ್ಷರ ಬರೆಯಲಾರದ ಸ್ಥಿತಿಯಲ್ಲಿ ನಾನಿಲ್ಲ. ನನ್ನ ಬಗ್ಗೆ ಮಾತನಾಡೋರು ನನ್ನ ತಾಳ್ಮೆ ಪರೀಕ್ಷೆ ಮಾಡಬೇಡಿ. ಕಳೆದ ಹನ್ನೆರಡು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ.ಎಂದಾದರೂ ಕನ್ನಡ ತಪ್ಪಾಗಿ ಮಾತನಾಡಿದ್ದೇನಾ? ಯಾವುದಾದರೂ ಹೆಸರನ್ನು ತಪ್ಪಾಗಿ ಹೇಳಿದ್ದೇನಾ? ಸ್ಪಷ್ಟವಾಗಿ ಕನ್ನಡದಲ್ಲಿಯೇ ಭಾಷಣ ಮಾಡುತ್ತೇನೆ. ನನ್ನ ಸಾಮರ್ಥ್ಯವನ್ನು ನೋಡಿ ಮಾತನಾಡಿ ಎಂದು ಎಚ್ಚರಿಕೆ ನೀಡಿದ್ದಾರ.

'ಶುಭವಾಗಲಿ' ಬರೆಯಲು ಪರದಾಡಿದ ಕನ್ನಡ ಸಂಸ್ಕೃತಿ ಸಚಿವ; ಶಿವರಾಜ ತಂಗಡಗಿ ಕನ್ನಡ ಭಾಷಾ ಜ್ಞಾನದ ಬಗ್ಗೆ ಶುರುವಾಯ್ತು ಚರ್ಚೆ!

ಕಳೆದ ಎರಡು ವರ್ಷ ಇಲಾಖೆ ಹೇಗೆ ನಿಭಾಯಿಸಿದ್ದೇನೆ ಅಂತ ನೋಡಿ. ನನ್ನ ಕಾರ್ಯನಿರ್ವಹಣೆ ಬಗ್ಗೆ ಸಾಹಿತಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ನನ್ನ ಬಗ್ಗೆ ಏನು ಸಿಗ್ತಿಲ್ಲಾ ಅಂತ ಅಸಹಾಯಕರಾಗಬೇಡಿ ಎಂದು ತಂಗಡಗಿ ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿಯವರನ್ನ ಕಿತ್ತೂರು ರಾಣಿ ಚೆನ್ನಮ್ಮಗೆ ಹೋಲಿಸಿದ್ರೆ ತಪ್ಪೇನು? : ಸಚಿವ ಶಿವರಾಜ ತಂಗಡಗಿ

ಕನ್ನಡ ಮತ್ತು ಸಂಸ್ಕೃತಿ ಸಚಿವ Shivaraj Tangadagiಗೆ ಕನ್ನಡ ಬರೋದಿಲ್ವಾ? । Suvarna News | Kannada News