ಬೆಂಗಳೂರು (ಆ.26):  ಕೊರೋನಾ ಸೋಂಕಿನಿಂದ ತಾವು ಸಂಪೂರ್ಣ ಗುಣಮುಖವಾಗಿದ್ದು ಗುರುವಾರದಿಂದ ಕರ್ತವ್ಯಕ್ಕೆ ಮರಳುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಈ ಸಂಬಂಧ ಬುಧವಾರ ಟ್ವೀಟ್‌ ಮಾಡಿರುವ ಅವರು, ನನ್ನ ಕೋವಿಡ್‌ ಪರೀಕ್ಷೆ ನೆಗೆಟಿವ್‌ ಬಂದಿದೆ. ಈಗ ಸಂಪೂರ್ಣ ಗುಣಮುಖವಾಗಿದ್ದು, ಗುರುವಾರದಿಂದ ಸಾರ್ವಜನಿಕ ಸೇವೆಗೆ ಮರಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳು ಎಂದು ಹೇಳಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಸಹಕಾರ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಹೋದ್ಯೋಗಿಗಳು ಮತ್ತು ತಮ್ಮ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು: 17 ದಿನದಲ್ಲಿ 50 ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ.

ಆಗಸ್ಟ್‌ 9ರಂದು ಕೋವಿಡ್‌ ಸೋಂಕಿಗೆ ಒಳಗಾಗಿದ್ದ ಸಚಿವ ಶ್ರೀರಾಮುಲು ಅವರು ಆ.16ರಂದು ಗುಣಮುಖರಾಗಿ ಬಿಡುಗಡೆಯಾಗಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇದರ ನಡುವೆ ಅವರ ತಾಯಿ ಮತ್ತು ಸಹೋದರ ಕೂಡ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದರಾದರೂ ಆ.21ರಂದು ತಾಯಿ ಹೊನ್ನೂರಮ್ಮ ಅವರು ವಯೋಸಹಜವಾಗಿ ಸಾವನ್ನಪ್ಪಿದ್ದರು. ಇದರಿಂದ ಸಚಿವರು ಕರ್ತವ್ಯಕ್ಕೆ ಮರಳಿರಲಿಲ್ಲ. ಬಳಿಕ ಮತ್ತೊಮ್ಮೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕ ಸೇವೆಗೆ ವಾಪಸಾಗುವುದಾಗಿ ತಿಳಿಸಿದ್ದಾರೆ.

ಸೆಪ್ಟಂಬರ್‌ ಅಂತ್ಯದೊಳಗೆ ರಾಜ್ಯದಲ್ಲಿ ಕೊರೋನಾ ಸೋಂಕಿರ ಸಂಖ್ಯೆ 6 ಲಕ್ಷಕ್ಕೆ?

"