ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಸಚಿವ ಸುಧಾಕರ್

ಕರ್ನಾಟಕದಲ್ಲಿ ಕೊರೋನಾ ಎರಡನೇ ಶುರುವಾಗಿದ್ದು, ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಎಚ್ಚರಿಕೆ ಕೊಟ್ಟಿದ್ದಾರೆ.

Minister Sudhakar Lockdown Warns To Peoples for Corona Second wave in Karnataka rbj

ಬೆಂಗಳೂರು, (ಮಾ.24): ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಲಾಕ್‍ಡೌನ್ ಮಾಡಬೇಕೆಂಬ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಅನಿವಾರ್ಯ ಪರಿಸ್ಥಿತಿ ನಿರ್ಮಾಣ ಮಾಡಬಾರದೆಂದು ಎಂದರು.

ಶುರುವಾಯ್ತು ಕೊರೋನಾ 2ನೇ ಅಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಮಗೆ ಲಾಕ್ ಡೌನ್ ಮಾಡಿದರೆ ಖುಷಿ ಇಲ್ಲ. ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗಿದ್ದು, ಹಲವು ನಗರಗಳಲ್ಲಿ ಮತ್ತೆ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಜನರ ಸಹಕಾರ ಮುಖ್ಯ ಎಂದು ಹೇಳಿದರು.

ನಾನಾಗಲಿ, ಸಿಎಂ ಆಗಲಿ ಏನು ಮಾಡಬೇಕಾಗುತ್ತದೆ. ಸೋಂಕು ಹೆಚ್ಚಾದರೆ ನಮಗೆ ಬೇರೆ ಮಾರ್ಗ ಇಲ್ಲ ಲಾಕ್ ಡೌನ್ ಮಾಡಲಾಗುತ್ತದೆ.  ಇನ್ನು ರಾಜ್ಯದಲ್ಲಿ ಮತ್ತೆ ಕಂಟೇನ್ಮೆಂಟ್ ಜೋನ್ ಜಾರಿ ಮಾಡುವ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios