ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ. ಜಿಎಸ್‌ಟಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಬಳ್ಳಾಪುರ (ಆ.31): ರಾಜ್ಯಕ್ಕೆ ಬರಬೇಕಿರುವ ಜಿಎಸ್ಟಿಹಣ ಕೇಳಲು ಧೈರ್ಯ ಬೇಕಿಲ್ಲ ಎಂದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೇಂದ್ರದ ಬಳಿ ಜಿಎಸ್ಟಿಹಣ ಕೇಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂಬ ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಹಾಮಾರಿ ಕೊರೊನಾ ಕಾರಣದಿಂದ ಎಲ್ಲಾ ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿವೆ. ಇದಕ್ಕೆ ಕರ್ನಾಟಕವು ಹೊರತಾಗಿಲ್ಲ. ನಮಗೆ ಬರಬೇಕಿರುವ ಕೇಂದ್ರದ ಜಿಎಸ್‌ಟಿ ಹಣ ಖೋತಾ. ಆದರೆ, ರಾಜ್ಯದ ಪ್ರಗತಿಗೆ ತುಂಬ ನಷ್ಟವಾಗುತ್ತದೆ.
GST ನಷ್ಟ ಭರ್ತಿಗೆ ಸಾಲ ಪಡೆಯಿರಿ: ರಾಜ್ಯಕ್ಕೆ ಕೇಂದ್ರದ ಉಚಿತ ಸಲಹೆ...
ಆದ್ದರಿಂದ ಮುಖ್ಯಮಂತ್ರಿಗಳು, ಗೃಹ ಸಚಿವರು ಕೇಂದ್ರದ ವಿತ್ತ ಸಚಿವರನ್ನು ಭೇಟಿ ಮಾಡಿ ಅವರಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ಇನ್ನು ಜಿಎಸ್‌ಟಿ ಹಣ ಕೇಳಕ್ಕೆ ರಾಜ್ಯ ಸರ್ಕಾರಕ್ಕೆ ಧೈರ್ಯ ಬೇಕಿಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸಚಿವರು, ರಾಜ್ಯದಲ್ಲಿ ಆರ್ಥಿಕ ಪ್ರಗತಿ, ಶಿಸ್ತು ಬರಬೇಕಾದರೆ ಕೇಂದ್ರ ಕೊಡಬೇಕಾದ ಜಿಎಸ್‌ಟಿ ಹಣ ಬರಬೇಕೆಂದರು.