Asianet Suvarna News Asianet Suvarna News

'9 ರಲ್ಲಿ 8 ಬೇಡಿಕೆ ಈಡೇರಿಕೆ : ಯಾರ ಮಾತಿಗೂ ಕಿವಿಗೊಡದೆ ಮುಷ್ಕರ ನಿಲ್ಲಿಸಿ'

ರಾಜ್ಯ ಸರ್ಕಾರ ಈಗಾಗಲೇ 8 ಬೇಡಿಕೆ ಈಡೇರಿಸಿದೆ. ದಯವಿಟ್ಟು ಮುಷ್ಕರ ಕೈ ಬಿಡಿ. ನಿಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.  ರಾಜ್ಯ ಸರ್ಕಾರ ಸ್ಪಂದಿಸಿರುವ ರೀತಿಯನ್ನು ಗಮನಿಸಿ ನಿಮ್ಮ ನಿರ್ಧಾರ ಬದಲಾಯಿಸಿ. ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ ಎಂದು ಸುಧಾಕರ್ ಮುಷ್ಕರ ನಿರತ ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ. 

Minister Sudhakar urges  Transport Employees to Stop bus Strike snr
Author
Bengaluru, First Published Apr 9, 2021, 1:59 PM IST

ಬೆಂಗಳೂರು (ಏ.09):  ರಾಜ್ಯದಲ್ಲಿ ಸಾರಿಗೆ ಮುಷ್ಕರ ಮುಂದುವರಿದೆ. ಮೂರನೇ ದಿನಕ್ಕೆ ಕಾಲಿಟ್ಟಿದ್ದು ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ನೌಕರರಲ್ಲಿ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ. 

ರಾಜ್ಯ ಸರ್ಕಾರ ಈಗಾಗಲೇ 8 ಬೇಡಿಕೆ ಈಡೇರಿಸಿದೆ. ದಯವಿಟ್ಟು ಮುಷ್ಕರ ಕೈ ಬಿಡಿ. ನಿಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.  ರಾಜ್ಯ ಸರ್ಕಾರ ಸ್ಪಂದಿಸಿರುವ ರೀತಿಯನ್ನು ಗಮನಿಸಿ ನಿಮ್ಮ ನಿರ್ಧಾರ ಬದಲಾಯಿಸಿ. ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ ಎಂದು ಸುಧಾಕರ್ ಮನವಿ ಮಾಡಿದ್ದಾರೆ. 

ಸರ್ಕಾರದ ವಿರುದ್ದ ಮತ್ತೆ ಸಾರಿಗೆ ನೌಕರರ ಆಕ್ರೋಶ

ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಇನ್ನೂ ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ ರೀತಿ ನೌಕರರಿಗೆ ಸ್ಪಂದಿಸಿರುವುದನ್ನು ಗಮನಿಸಿ ಮುಷ್ಕರ ಕೈ ಬಿಡಬೇಕು.  ಕಾಲಕಾಲಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ ಎಂದು ಆರೋಗ್ಯ ಸಚಿವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ಒಟ್ಟು 1,953.45 ಕೋಟಿ ರು. ನಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ಸರ್ಕಾರದ ಈ ಕ್ರಮವನ್ನು ಪರಿಗಣಿಸಿ ಮುಷ್ಕರ ನಿಲ್ಲಿಸಿ ಎಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

Follow Us:
Download App:
  • android
  • ios