Asianet Suvarna News Asianet Suvarna News

RIP Umesh Katti ಉಮೇಶ್ ಕತ್ತಿ ನಿಧನದಿಂದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ!

ಬಿಜೆಪಿ ಆಯೋಜಿಸಿದ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಮೊದಲ ಬಾರಿಗೆ ಮುಂದೂಡಲ್ಪಟ್ಟಿದ್ದ ಕಾರ್ಯಕ್ರಮ ಇದೀಗ ಉಮೇಶ್ ಕತ್ತಿ ನಿಧನದಿಂದ ಮತ್ತೆ ಮುಂದೂಡಿಕೆಯಾಗಿದೆ. ಈ ಹೊಸ ದಿನಾಂಕವನ್ನು ಘೋಷಿಸಲಾಗಿದೆ.

Minister Umesh katti demise CM Basavaraj Bommai postpone BJP Janotsava celebration event 3rd time ckm
Author
First Published Sep 7, 2022, 4:03 PM IST

ಬೆಂಗಳೂರು(ಸೆ.07): ಕರ್ನಾಟಕ ಬಿಜೆಪಿ ಸರ್ಕಾರ ಮೂರು ವರ್ಷ ಹಾಗೂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗುತ್ತಿದೆ. ಇದೀಗ ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆ(ಸೆ.08) ಆಯೋಜಿಸಿದ್ದ ಅತೀ ದೊಡ್ಡ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಿದೆ. ಖತ್ತಿ ನಿಧನದಿಂದ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.

ಹೀಗಾಗಿ ಮೂರು ದಿನ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ.  ಇತ್ತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ಮೂರು ವರ್ಷದಲ್ಲಿ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಲು ಬಿಜೆಪಿ ಜನೋತ್ಸವ(BJP Janostva) ಕಾರ್ಯಕ್ರಮ ಆಯೋಜಿಸಿತ್ತು. ಮೊದಲ ಬಾರಿಗೆ ಜುಲೈ 28 ರಂದು ಬಿಜೆಪಿ ಜನೋತ್ಸವ(Karnataka Bjp Celebration Event) ಕಾರ್ಯಕ್ರಮ ಆಯೋಜಿಸಿತ್ತು. ದೊಡ್ಡಬಳ್ಳಾಪುರದಲ್ಲಿ(Doddaballapur) ಅತೀ ದೊಡ್ಡ ಕಾರ್ಯಕ್ರಮಕ್ಕೆ ಎಲ್ಲಾ ತಯಾರಿಯೂ ನಡೆದಿತ್ತು. ಆದರೆ ಸುಳ್ಯದಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ(Praveen Nettar) ಹತ್ಯೆ ಹಾಗೂ ಬಳಿಕ ಬಿಜೆಪಿ(BJP Workers), ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ರಾಜ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇತ್ತ ಪ್ರವೀಣ್ ನೆಟ್ಟಾರು ಕುಟಂಬಸ್ಥರ ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ, ಕುಟುಂಬಸ್ಥರ ಕಣ್ಣೀರಿನ ನಡುವೆ ಜನೋತ್ಸವ ಕಾರ್ಯಕ್ರಮ ಆಯೋಜಿಸುತ್ತಿಲ್ಲ.  ಪ್ರವೀಣ್‌ ಹತ್ಯೆಯಾದ ಬಳಿಕ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ವಿಧಾನಸೌಧದಲ್ಲಿನ ಕಾರ್ಯಕ್ರಮ ಮತ್ತು ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ ಜನೋತ್ಸವ ಸಮಾರಂಭವನ್ನು ರದ್ದು ಮಾಡಲಾಗಿದೆ ಎಂದು ಬೊಮ್ಮಾಯಿ(CM Basavaraj Bommai) ಹೇಳಿದ್ದರು.

ಇದಾದ ಬಳಿಕ ಆಗಸ್ಟ್ ತಿಂಗಳಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿತ್ತು. ದಿನಾಂಕ ನಿಗದಿಪಡಿಸುವ ಮೊದಲೇ ಭಾರಿ ಮಳೆ(Karnataka Rain), ಪ್ರವಾಹ ಸೇರಿದಂತೆ ಹಲವು ಕಾರಣಗಳಿಂದ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಲಾಗಿತ್ತು. ಎರಡು ಬಾರಿ ಮುಂದೂಡಿಕೆಯಾಗಿದ್ದ ಜನೋತ್ಸವ ಕಾರ್ಯಕ್ರವನ್ನು ಸೆಪ್ಟೆಂಬರ್ 8ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಸೆಪ್ಟೆಂಬರ್ 6 ರ ರಾತ್ರಿ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕತ್ತಿ ನಿಧನದ ಹಿನ್ನಲೆಯಲ್ಲಿ ಮತ್ತೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಬೊಮ್ಮಾಯಿ ಅಧಿಕೃತ ಹೇಳಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕ ವಿಷಯವಾಗಿ ಇಂದೂ ಗಟ್ಟಿ ಇದ್ದೇನೆ ಎಂದಿದ್ದ ಕನಸುಗಾರ ಉಮೇಶ್ ಕತ್ತಿ

ಪೂರ್ಣಗೊಂಡಿದ್ದ ಎಲ್ಲಾ ತಯಾರಿ: ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮ ಒಂದು ದಿನಕ್ಕೆ ಮೊದಲೇ ರದ್ದಾಗಿದೆ. ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ಎಲ್ಲಾ ತಯಾರಿ ಮಾಡಿಕೊಂಡಿತ್ತು. ಮೂರು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇತ್ತು. 33ಕ್ಕೂ ಹೆಚ್ಚು ಸಮಿತಿಗಳನ್ನು ಮಾಡಲಾಗಿತ್ತು. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ದೊಡ್ಡಬಳ್ಳಾಪುರದಲ್ಲಿ ಠಿಕಾಣಿ ಹೂಡಿದ್ದರು.

ಸಮಾವೇಶವನ್ನು ಉದ್ಘಾಟಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸುವುದು ಖಚಿತವಾಗಿತ್ತು. 19 ವಿಧಾನಸಭಾ ಕ್ಷೇತ್ರಗಳಿಂದ ಜನರು ಆಗಮಿಸುವ ನಿರೀಕ್ಷೆ ಇಡಲಾಗಿತ್ತು. 4,000ಕ್ಕೂ ಹೆಚ್ಚು ಬಸ್ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮಳೆ ಸಮಸ್ಯೆಯಾಗದಂತೆ ಅತೀದೊಡ್ಡ ಪೆಂಡಾಲ್ ವ್ಯವಸ್ಥೆ ಮಾಡಲಾಗಿತ್ತು. 

ಉಮೇಶ್ ಕತ್ತಿ ನಿಧನ: ಬೆಳಗಾವಿ ಜಿಲ್ಲೆಯಾದ್ಯಂತ ಒಂದು ದಿನದ ಶೋಕಾಚರಣೆ!

Follow Us:
Download App:
  • android
  • ios