Asianet Suvarna News Asianet Suvarna News

ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ತಗ್ಗಿದ ಅಪಘಾತ: ಈ ವರ್ಷ ಮೇ ವರೆಗೆ 31 ಮಂದಿ ಸಾವು

ಸಾಲು ಸಾಲು ಅಪಘಾತಗಳಿಂದಾಗಿ ಎನ್‌ಎಚ್ 275 ಎಕ್ಸ್‌ಪ್ರೆಸ್‌ವೇ ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿತ್ತು. ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಅಪಘಾತಗಳು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. 

Minor accident on Bengaluru Mysuru Expressway 31 killed till May this year gvd
Author
First Published Jun 17, 2024, 12:08 PM IST

ರಾಮನಗರ (ಜೂ.17): ಪೊಲೀಸ್‌ ಇಲಾಖೆ ಕೈಗೊಂಡ ಸುರಕ್ಷತಾ ಕ್ರಮಗಳ ಪರಿಣಾಮ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖಗೊಂಡಿದೆ. ನಿರಂತರ ಅಪಘಾತಗಳಿಂದಾಗಿ ಡೆತ್‌ ವೇ ಎಂಬ ಕಳಂಕಕ್ಕೆ ಪಾತ್ರವಾಗಿದ್ದ ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2023 ಹಾಗೂ 2024ನೇ ಸಾಲಿಗೆ ಹೋಲಿಕೆ ಮಾಡಿದರೆ ಅಪಘಾತಗಳ ಪ್ರಮಾಣ ತಗ್ಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಸಾಲು ಸಾಲು ಅಪಘಾತಗಳಿಂದಾಗಿ ಎನ್‌ಎಚ್ 275 ಎಕ್ಸ್‌ಪ್ರೆಸ್‌ವೇ ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿತ್ತು. ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಅಪಘಾತಗಳು ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಸಚಿವರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳು ಹೆದ್ದಾರಿ ಅವ್ಯವಸ್ಥೆಯ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದರು.

ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಸ್ಯಾಂಡಲ್‌ವುಡ್‌ನ ಸ್ಟಾರ್ ಹಾಸ್ಯ ನಟ ಚಿಕ್ಕಣ್ಣನಿಗೆ ಢವ ಢವ ಶುರು!

ಆನಂತರ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ್‌, ಪೊಲೀಸ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಹೆದ್ದಾರಿಗಿಳಿದು ಅಪಘಾತ ಸಂಭವಿಸಲು ಕಾರಣವಾಗಿರುವ ಅಂಶಗಳನ್ನು ಗುರುತಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಇದರ ಪರಿಣಾಮ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಾಲಿನಲ್ಲಿ ಅಪಘಾತದ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.

ತಗ್ಗಿದ ಅಪಘಾತಗಳ ಸಂಖ್ಯೆ: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 2023ನೇ ಸಾಲಿನಲ್ಲಿ ಜನವರಿಯಿಂದ ಮೇ ತಿಂಗಳವರೆಗೆ 288 ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 100 ಮಂದಿ ಸಾವನ್ನಪ್ಪಿದ್ದರೆ, 301 ಮಂದಿ ಗಾಯಗೊಂಡಿದ್ದರು. 2024ರ ಜನವರಿಯಿಂದ ಮೇ ತಿಂಗಳವರೆಗೆ ಒಟ್ಟು 125 ಅಪಘಾತಗಳು ನಡೆದಿದ್ದು, 31 ಮಂದಿ ಮೃತಪಟ್ಟರೆ, 167 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು-ನಿಡಘಟ್ಟ ಮತ್ತು ನಿಡಘಟ್ಟ-ಮೈಸೂರು ಎರಡೂ ಮಾರ್ಗಗಳಲ್ಲಿ 5 ಆಯಕಟ್ಟಿನ ಸ್ಥಳಗಳಲ್ಲಿ ಈ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಎರಡೂ ಕಡೆಯ ಕ್ಯಾಮೆರಾಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಎರಡೂ ಜಿಲ್ಲೆಯ ಜಿಲ್ಲಾ ಪೊಲೀಸ್‌ ಕಂಟ್ರೋಲ್‌ ರೂಂನಲ್ಲಿ ಆಯಾ ಜಿಲ್ಲೆಗೆ ಸೇರಿದ ಸರ್ವರ್‌ ಸ್ಥಾಪಿಸಿ ಆಯಾ ಜಿಲ್ಲಾ ವ್ಯಾಪ್ತಿಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಎಸ್‌ವೈ ಇಂದು ಸಿಐಡಿ ಮುಂದೆ ಹಾಜರು?

ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2023ರ ಜನವರಿ - ಮೇವರೆಗೆ 100 ಸಾವುಗಳು, 2024ರ ಜನವರಿ - ಮೇವರೆಗೆ 31 ಸಾವುಗಳು. 2023ರ ಮೇನಲ್ಲಿ 29 ಸಾವು, 2024ರ ಮೇನಲ್ಲಿ 3 ಸಾವುಗಳು ಸಂಭವಿಸಿವೆ. ಪೊಲೀಸರ ನಿರಂತರ ಪ್ರಯತ್ನಗಳು ಫಲ ನೀಡುತ್ತಿವೆ. ಎಕ್ಸ್‌ಪ್ರೆಸ್‌ವೇ ಅನ್ನು ಡೆತ್ ಫ್ರೀ ಝೋನ್ ಮಾಡಲು ಒಟ್ಟಾಗಿ ಶ್ರಮಿಸೋಣ.
-ಅಲೋಕ್ ಕುಮಾರ್, ಎಡಿಜಿಪಿ, ರಸ್ತೆ ಸುರಕ್ಷತಾ ವಿಭಾಗ

Latest Videos
Follow Us:
Download App:
  • android
  • ios