ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ವ್ಯಕ್ತಿಯೊಬ್ಬರು ಅಂತ್ಯಕ್ರಿಯೆಗೆ ತೆಗೆದುಕೊಂಡು ಹೋಗುವಾಗ ಬದುಕಿ ಬಂದಿದ್ದಾರೆ. ಬಂಕಾಪುರದ ಬಳಿ ಆಂಬ್ಯುಲೆನ್ಸ್‌ನಲ್ಲಿ ಈ ಅಚ್ಚರಿಯ ಘಟನೆ ನಡೆದಿದ್ದು, ಸದ್ಯ ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳ್ಳಿ (ಫೆ.10): ವ್ಯಕ್ತಿ ಸಾವು ಕಂಡಿದ್ದಾನೆ ಎಂದು ಆತನ ಮೃತದೇಹವನ್ನು ಊರಿಗೆ ಕರೆತರುವ ಹಾದಿಯಲ್ಲಿ ಬದುಕಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬಳಿಕ ಬಂಕಾಪುರದಲ್ಲಿ ಈ ಘಟನೆ ನಡೆದಿದೆ. ಈಗ ಈ ವ್ಯಕ್ತಿಯನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಕುಟುಂಬಸ್ಥರು ದಾಖಲು ಮಾಡಿದ್ದಾರೆ. ಅದಕ್ಕೂ ಮುನ್ನ ಆತನನ್ನು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಖಾಸಗಿ ವೈದ್ಯರು ತಿಳಿಸಿದ್ದರು. ಈ ವೇಳೆ ಆತನ ಮೃತದೇಹವವನ್ನು ಊರಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಬದುಕಿರುವ ಅಂಶ ಬೆಳಕಿಗೆ ಬಂದಿದೆ. 45 ವರ್ಷದ ಬಿಷ್ಣಪ್ಪ ಅಶೋಕ ಗುಡಿಮನಿ ಅಲಿಯಾಸ್ ಮಾಸ್ತರ್ ಸತ್ತು ಬದುಕಿದ ವ್ಯಕ್ತಿ. ಬಿಷ್ಣಪ್ಪ ಬಂಕಾಪುರದ ಮಂಜುನಾಥ ನಗರದ ನಿವಾಸಿಯಾಗಿದ್ದರು.
ಕಳೆದ ಮೂರು ನಾಲ್ಕು ದಿನದಿಂದ ಅನಾರೋಗ್ಯದಿಂದ ಬಿಷ್ಣಪ್ಪ ಬಳಲುತ್ತಿದ್ದರು. ಈ ವೇಳೆ ಅವರನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಸಿರು ಇಲ್ಲದೇ ಇರುವ ಲಕ್ಷಣ ಕಂಡಾಗ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.

ನಂತರ ಅವರ ಪತ್ನಿ ಶೀಲಾ, ಸಂಬಂಧಿಕರ ಜತೆಗೆ ಆಂಬ್ಯುಲೆನ್ಸ್‌ನಲ್ಲಿ ಮೃತದೇಹವನ್ನು ಬಂಕಾಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ "ಡಾಬಾ ಬಂತು ನೋಡು ಊಟ ಮಾಡುತ್ತೀಯಾ?' ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಡಿದ್ದಾರೆ.

ಇದರಿಂದ ಗಾಬರಿಯಾದ ಪತ್ನಿ ಶೀಲಾ ಹಾಗೂ ಅವರ ಸಂಬಂಧಿಗಳು ಬಿಷ್ಣಪ್ಪನನ್ನು ಶಿಗ್ಗಾಂವಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರೋದು ದೃಢವಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ವೈದ್ಯರು ಕಳುಹಿಸಿಕೊಟ್ಟಿದ್ದಾರೆ. ಮೃತದೇಹ ಎಂದುಕೊಂಡು ತಂದ ಆಂಬ್ಯುಲೆನ್ಸ್‌ನಲ್ಲಿಯೇ ಕಿಮ್ಸ್‌ಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಕಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಬಿಷ್ಣಪ್ಪ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ರಸ್ತೆ ಗುಂಡಿಯಲ್ಲಿ ಬಿದ್ದು ಸಾಗಿದ ಆ್ಯಂಬುಲೆನ್ಸ್‌ನಲ್ಲಿ ಪವಾಡ, ಒಳಗಿದ್ದ ಮೃತದೇಹಕ್ಕೆ ಬಂತು ಜೀವ!

ಇನ್ನು ಬಿಷ್ಣಪ್ಪ ಅವರ ಅಂತ್ಯಸಂಸ್ಕಾರಕ್ಕಾಗಿ ಕುಟುಂಬಸ್ಥರು ಮನೆಯ ಬಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಅವರ ಸ್ನೇಹಿತರು ಶೋಕದ ಬ್ಯಾನರ್‌ಗಳನ್ನು ದಾರಿಯುದ್ದಕ್ಕೂ ಹಾಕಿದ್ದರು. ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿಯೂ ಸತ್ತ ಸುದ್ದಿ ಪ್ರಚಾರವಾಗಿತ್ತು. ಬಂಕಾಪುರ ಪಟ್ಟಣದಲ್ಲಿ ಹಾಕಲಾಗಿದ್ದ ಬ್ಯಾನರ್‌ಗಳನ್ನು ತೆಗೆಯಲಾಗಿದೆ. ಇನ್ನೊಂದೆಡೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಬಿಷ್ಣಪ್ಪಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಮಂಡ್ಯ: ಮೃತವ್ಯಕ್ತಿ ಹೆಸರಲ್ಲಿ ಆಧಾರ್‌ ಸೃಷ್ಟಿ, ಕೋಟ್ಯಂತರ ರೂ.ಮೌಲ್ಯದ ಸರ್ಕಾರಿ ಜಮೀನು ಪರಭಾರೆ!