Asianet Suvarna News Asianet Suvarna News

ಶಾಂತಿನಗರ ಅಭಿವೃದ್ಧಿ ಮಾಡಲಾಗದ ಶಾಸಕ ಹ್ಯಾರಿಸ್‌ ಬೆಂಗಳೂರನ್ನೇನು ಡೆವಲಪ್ ಮಾಡ್ತಾರೆ? ಎಎಪಿ ಕಿಡಿ

ಸ್ವ ಕ್ಷೇತ್ರ ಶಾಂತಿನಗರ ವಿಧಾನಸಭಾ ಕ್ಷೇತ್ರವನ್ನೇ ಅಭಿವೃದ್ಧಿ ಮಾಡಲಾಗದ ಶಾಸಕ ಎನ್‌.ಎ. ಹ್ಯಾರೀಸ್ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇವರಿಂದ ಬೆಂಗಳೂರನ್ನೂ ಅಭಿವೃದ್ಧಿ ಮಾಡಲಾಗುತ್ತದೆಯೇ ಎಂದು ಎಎಪಿ ಪ್ರಶ್ನೆ ಮಾಡಿದೆ. 

MLA NA Haris was Shanti Nagar Constituency not developed but how he will develop Bengaluru sat
Author
First Published Jan 27, 2024, 8:43 PM IST

ಬೆಂಗಳೂರು (ಜ.27): ರಾಜ್ಯದ ರಾಜಧಾನಿಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಶಾಂತಿನಗರ ವಿಧಾನಸಭಾ ಕ್ಷೇತ್ರವನ್ನೇ ಅಭಿವೃದ್ಧಿ ಮಾಡಲಾಗದ ಶಾಸಕ ಎನ್.ಎ. ಹ್ಯಾರಿಸ್‌ ಅವರಿಗೆ ಇಡೀ ಬೆಂಗಳೂರು ಅಭಿವೃದ್ಧಿ ಮಾಡುವ ಅಧಿಕಾರನ್ನು ಕೊಡಲಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್‌ ಅವರಿಗಿರುವ ಅರ್ಹತೆಯೇನು? ಇವರಿಂದ ಬೆಂಗಳೂರು ಅಭಿವೃದ್ಧಿಯಾಗಲ್ಲ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್‌.ಎ. ಹ್ಯಾರಿಸ್‌ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್‌ ಆದ್ಮಿ ಪಾರ್ಟಿಯಿಂದ ಭಾರಿ ವಿರೋಧ ವ್ಯಕ್ತಪಡಿಸಿದೆ. ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿನಗರವನ್ನೇ ಅಭಿವೃದ್ಧಿ ಪಡಿಸಲಾಗದ ಎನ್‌.ಎ. ಹ್ಯಾರಿಸ್‌ ಅವರ ಕೈಗೆ ಇಡೀ ಬೆಂಗಳೂರು ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ವಹಿಸಿರುವುದು ಪ್ರಶ್ನಾರ್ಹವಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್‌ ಅವರಿಗಿರುವ ಅರ್ಹತೆಯೇನು? ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಪ್ರಶ್ನಿಸಿದ್ದಾರೆ.

ಅಯೋಧ್ಯ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ 12 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡ ಸರ್ಕಾರ!

ಬಿಡಿಎ ಅಧ್ಯಕ್ಷರಾಗಿ ಹ್ಯಾರಿಸ್‌ ನೇಮಕ ವಿಚಾರವಾಗಿ ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಎಎಪಿ ಮುಖಂಡ ಮೋಹನ್‌ ದಾಸರಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಜನಪ್ರತಿನಿಧಿಗಳಿಗೆ ಮಣೆ ಹಾಕುವ ಪದ್ಧತಿ ಬಿಟ್ಟು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‍‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದಾಗ ಬೆಂಗಳೂರು ಅಭಿವೃದ್ಧಿಯತ್ತ ಸಾಗಬಹುದು ಎಂಬ ಭರವಸೆ ವ್ಯಕ್ತವಾಗಿತ್ತು. ಆದರೆ 7 ತಿಂಗಳ ಅವಧಿಯಲ್ಲೇ ಅವರಿಂದ ಅಧಿಕಾರವನ್ನು ಕಸಿದು ಪುನಃ ರಾಜಕಾರಣಿಗಳ ಹೆಗಲಿಗೆ ಏರಿಸಲಾಗುತ್ತಿದೆ. ಇಂತಹ ಬದಲಾವಣೆಗೆ ಎದುರಾದ ಒತ್ತಡವೇನು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿನ ಈಜಿಪುರ ಸ್ಲಂ ಪ್ರದೇಶವನ್ನು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮಾಲಿಕತ್ವದ ಮೆಹರಿಕ್ ಹೋಲ್ಡಿಂಗ್ಸ್ ಸಂಸ್ಥೆಯ ಜೊತೆಗೂಡಿ ಮಾಡಿಕೊಂಡ ಒಪ್ಪಂದ ಸಂಪೂರ್ಣ ಹಳ್ಳ ಹಿಡಿದಿದೆ. ಅಭಿವೃದ್ಧಿಪಡಿಸಿ ನೂತನ ಮನೆಗಳನ್ನು ಕಟ್ಟಿಕೊಡುತ್ತೇವೆಂಬ ನೆಪವಡ್ಡಿ ತೆರವುಗೊಳಿಸಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಆಗಿದೆ. ಇದುವರೆಗೂ ಅಲ್ಲಿನ ಸಾವಿರಾರು ಕುಟುಂಬಗಳು ಬೀದಿಬದಿಯಲ್ಲಿಯೇ ವಾಸಿಸುತ್ತಿವೆ. ಇಂತಹ ಕರಾಳ ಮುಖವನ್ನು ಹೊತ್ತಿರುವ ಶಾಸಕ ಹ್ಯಾರಿಸ್, ಬೆಂಗಳೂರಿನ ಅಭಿವೃದ್ಧಿ ಹೇಗೆ ಪಡಿಸುತ್ತಾರೆ ಎಂಬುದೇ ಯಕ್ಷಪ್ರಶ್ನೆಯಾಗಿದೆ ಎಂದರು.

ನಗರದ ಅತಿದೊಡ್ಡ ಕೊಳಚೆ ಪ್ರದೇಶವೆಂದರೆ ಅದು ಶಾಂತಿನಗರ ವಿಧಾನಸಭಾ ಕ್ಷೇತ್ರವಾಗಿದೆ. ಮಿತಿಯೇ ಇಲ್ಲದ ರಾಜಕಾಲುವೆ ಒತ್ತುವರಿ, ಲೆಕ್ಕವಿಲ್ಲದಷ್ಟು ಹೊಂಡ-ಗುಂಡಿಗಳು, ಮ್ಯಾನ್‌ಹೋಲ್‌ ಹಾಗೂ ಚರಂಡಿಗಳ ತ್ಯಾಜ್ಯ ನೀರೆಲ್ಲ ಮೇಲೆ ಬಂದು ಗಬ್ಬೆದ್ದ ರಸ್ತೆಗಳೇ ತುಂಬಿವೆ. ದಿನಕ್ಕೊಂದು ಬಾರ್‌, ಪಬ್‌, ಹುಕ್ಕಾಬಾರ್‌ಗಳು ಹುಟ್ಟಿಕೊಳ್ಳ  ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅವ್ಯವಸ್ಥೆಗಳ ಕೂಪವಾಗಿವೆ. ಲೆಕ್ಕವಿಲ್ಲದಷ್ಟು ಅನಧಿಕೃತ ಕಟ್ಟಡಗಳು, ಪಬ್‌, ಹುಕ್ಕಾಬಾರ್‌ಗಳು ತಾಂಡವವಾಡುತ್ತಿವೆ. ಡ್ರಗ್‌ ಮಾಫಿಯಾಗೆ ಕಡಿವಾಣವೇ ಇಲ್ಲವಾಗಿದೆ. ಒಂದೇ ಒಂದು ಸ್ಲಮ್‌ ಅಭಿವೃದ್ಧಿ ಪಡಿಸಿರುವ ಉದಾಹರಣೆ ಇದ್ದರೆ ಹೇಳಿ? ಎಂದು ಪ್ರಶ್ನಿಸಿದರು.

ಬಿಗ್‌ಬಾಸ್‌ ಸೀಸನ್ 10 ಟಾಪ್ ಸಿಕ್ಸ್ ತುಕಾಲಿ, ಫೈವ್ ವಿನಯ್‌ಗೌಡ, ಟಾಪ್ ಫೋರ್‌ಗೆ ವರ್ತೂರು ಸಂತೋಷ್!

ಅನಧಿಕೃತ ಕಟ್ಟಡ, ಬಾರ್‌, ಪಬ್‌, ಹುಕ್ಕಾಬಾರ್‌ಗಳಿಗೆ ಹ್ಯಾರಿಸ್‌ ಕುಟುಂಬದವರೇ ಪಾಲುದಾರರು ಎಂಬ ಆರೋಪಗಳಿವೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತಪ್ಪಾದ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ. ಅವರ ಮಗ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ನಡೆಸಿರುವ ರೌಡಿಸಮ್‌, ಪುಂಡಾಟಗಳಿಗೆ ಲೆಕ್ಕವಿದೆಯೇ? ಸ್ವಂತ ಮಗನನ್ನು, ಸ್ವಂತ ಕ್ಷೇತ್ರವನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲಾಗದ ಹ್ಯಾರಿಸ್‌ ಅವರಿಂದ ಬೆಂಗಳೂರು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ? ಎಂದು ಮೋಹನ್‌ ದಾಸರಿ ಪ್ರಶ್ನಿಸಿದರು.

Latest Videos
Follow Us:
Download App:
  • android
  • ios