ಸಿಎಂ ಸನ್ನೆ ಮೇರೆಗೆ ಶಾಸಕರ ಸಸ್ಪೆಂಡ್‌: ಎಚ್‌ಡಿಕೆ ಆರೋಪ!

ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MLAs suspended on CM's orders HDK alleges karnataka assembly session 2024 rav

ಬೆಂಗಳೂರು (ಜು.20) :  ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಡೆ ವಿರೋಧಿಸಿ ಧರಣಿ ನಡೆಸುತ್ತಿದ್ದ ವೇಳೆ ಸಭಾಧ್ಯಕ್ಷರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸಭಾಧ್ಯಕ್ಷರು ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.

ದರ್ಪ, ದಬ್ಬಾಳಿಕೆ, ದುರಂಹಕಾರ ಹೊರಬಿದ್ದಿದೆ, ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು ಇವತ್ತು ರಾಜ್ಯದ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ಬುಲ್ಡೋಜ್‌ ನೀತಿ ಸರಿಯಲ್ಲ. ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪ ಸಮಂಜಸವಲ್ಲ. ಇದು ಕ್ಷುಲ್ಲಕ, ಕೀಳುಮಟ್ಟದ ಅಭಿರುಚಿ. ದಲಿತರ ಅನುಕಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ಕುಳಿತಿರುವವರು ಉಪಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್‌ನವರು ಅರ್ಥ ಮಾಡಿಕೊಳ್ಳಬೇಕು ಎಂದು ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌ ಪಕ್ಷ ಬೆಂಗಳೂರಲ್ಲಿ ಹಮ್ಮಿಕೊಂಡಿದ್ದ ಮಹಾಗಠಬಂಧನ್‌ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐಎಎಸ್‌ ಅಧಿಕಾರಿಗಳನ್ನು ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಐಎಎಸ್‌ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸದನದಲ್ಲಿ ಈ ವಿಚಾರವಾಗಿ ಜೆಡಿಎಸ್‌-ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾಗಿದ್ದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೇ ಸರಿ ಎನ್ನುವಂತೆ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ.

'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

 

ಹಿಂದೆ ನಾವು ಅಧಿಕಾರಿದಲ್ಲಿದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐಎಎಸ್‌ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳುಹಿಸಿ ಗಣ್ಯರನ್ನು ಬರ ಮಾಡಿಕೊಂಡಿಲ್ಲ ಎಂದು ಹೇಳಿದರು.

Latest Videos
Follow Us:
Download App:
  • android
  • ios