ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಂಪನಿ ಅಧ್ಯಕ್ಷ: ಲಖನ್ ಜಾರಕಿಹೊಳಿ
ಸೀಡಿ ತಯಾರಿಕೆ ಕಾರ್ಖಾನೆ ಬೆಳಗಾವಿಯಲ್ಲೇ ಇದೆ. ಸೀಡಿ ಬೆಳಗಾವಿಯಲ್ಲಿ ತಯಾರಾಗಿ ಕನಕಪುರ ಮತ್ತು ಬೆಂಗಳೂರಿನಲ್ಲಿ ರಿಲೀಸ್ ಆಗುತ್ತದೆ. 2000ರಿಂದ ಸೀಡಿ ಕಾರ್ಖಾನೆ ಚಾಲ್ತಿಯಲ್ಲಿದ್ದು, ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ವ್ಯಂಗ್ಯವಾಡಿದರು.
ಗೋಕಾಕ (ಫೆ.01): ಸೀಡಿ ತಯಾರಿಕೆ ಕಾರ್ಖಾನೆ ಬೆಳಗಾವಿಯಲ್ಲೇ ಇದೆ. ಸೀಡಿ ಬೆಳಗಾವಿಯಲ್ಲಿ ತಯಾರಾಗಿ ಕನಕಪುರ ಮತ್ತು ಬೆಂಗಳೂರಿನಲ್ಲಿ ರಿಲೀಸ್ ಆಗುತ್ತದೆ. 2000ರಿಂದ ಸೀಡಿ ಕಾರ್ಖಾನೆ ಚಾಲ್ತಿಯಲ್ಲಿದ್ದು, ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ವ್ಯಂಗ್ಯವಾಡಿದರು.
ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿ ಕೆಪಿಸಿಸಿ ಅಂದ್ರೆ, ಕರ್ನಾಟಕ ಪ್ರದೇಶ್ ಸೀಡಿ ಕಮಿಟಿ. ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸೀಡಿ ಕಂಪನಿ ಅಧ್ಯಕ್ಷ. ಖರ್ಗೆ, ಪರಮೇಶ್ವರ್, ಸಿದ್ದರಾಮಯ್ಯ ಸಾಹೇಬರು ಇದ್ದಾಗ ಕಾಂಗ್ರೆಸ್ ಬೇರೆ ಇತ್ತು. ಸಿದ್ದರಾಮಯ್ಯ, ಖರ್ಗೆ ಸಾಹೇಬರು ನಮ್ಮ ಗುರುಗಳು ಅಂತ ನಾವು ಒಪ್ಪುತ್ತೇವೆ. ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್ ಬಗ್ಗೆ ಯಾರೂ ಮಾತನಾಡಲ್ಲ. ಏಕೆಂದರೆ ಎಲ್ಲರ ಸೀಡಿಗಳು ಅವರ ಬಳಿ ಇವೆ ಎಂದು ಸಹೋದರ ರಮೇಶ್ ಹೇಳಿಕೆಯನ್ನು ಲಖನ್ ಸಮರ್ಥಿಸಿಕೊಂಡರು.
ರಮೇಶ್ ಜಾರಕಿಹೊಳಿಗೆ ಸುಳ್ಳು ಹೇಳುವ ಚಟವಿದೆ: ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ
2000ನೇ ಇಸವಿಯಿಂದ ಸೀಡಿ ಷಡ್ಯಂತ್ರ ಜೋರಾಗಿದೆ. ಬಹಳ ಜನರಿಗೆ ಅನ್ಯಾಯ ಆಗಿದೆ. ಬಹಳಷ್ಟುನೊಂದ ಅಧಿಕಾರಿಗಳು, ರಾಜಕಾರಣಿಗಳು, ಬ್ಯುಸಿನೆಸ್‌ಮೆನ್‌ಗಳಿದ್ದಾರೆ. ಅದಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇವೆ. ಡಿ.ಕೆ.ಶಿವಕುಮಾರ್ ಪೇಸಿಎಂ ಅಭಿಯಾನ ಮಾಡುತ್ತಿದ್ದಾರೆ. ನೀವು ಕರ್ನಾಟಕ ಪ್ರಚಾರ ಸೀಡಿ ಕಮಿಟಿ ಅಭಿಯಾನ ಆರಂಭ ಮಾಡಿ 150 ಸೀಟ್ ಬರುತ್ತದೆ ಎಂದರು. ಕಾಂಗ್ರೆಸ್ ಸರ್ಕಾರ ಬೀಳಲು ಬೆಳಗಾವಿಯವರೇ ಕಾರಣ. ನಾವು ಸಿಂಪಲ್ ಆಗಿಯೇ ಇರ್ತೀವಿ, ಜನ ನಮ್ಮ ಜೊತೆ ಇರ್ತಾರೆ. ರಮೇಶ್ ಜಾರಕಿಹೊಳಿಗೆ ಶಕ್ತಿ ಇದೆ ಅದಕ್ಕಾಗಿ ಬಹಿರಂಗವಾಗಿ ಮಾತನಾಡಿದ್ದಾರೆ.
ಆದರೆ, ಧೈರ್ಯ ಇಲ್ಲದೇ ಇರೋರು ಮನೆಯಲ್ಲಿ ಕುಳಿತುಕೊಳ್ಳುತ್ತಾರೆ. ಒಂದು ವರ್ಷದಿಂದ ನಮ್ಮ ಬೇಡಿಕೆ ಇದೆ. ಈ ಕೇಸನ್ನು ಸಿಬಿಐಗೆ ವಹಿಸಬೇಕು ಅಂತ. ಅನೇಕರು ನೊಂದು, ಬೆಂದು ಹೋಗಿದ್ದಾರೆ. ಬೆಂಗಳೂರು, ಮುಂಬೈ, ಕೇರಳದವರೆಗೆ ಸೀಡಿ ಮಾಡುವವರಿಗೆ ಲಿಂಕ್ ಇದೆ. ರಮೇಶ್ ಜಾರಕಿಹೊಳಿ ಅವರಿಗೆ ದಾಖಲೆ ಬಿಡುಗಡೆ ಮಾಡಬೇಡಿ ಸಿಬಿಐ ಕೊಡಿ ಎಂದು ಹೇಳಿದ್ದೇನೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬೆಳಗಾವಿ ಗ್ರಾಮೀಣ ಶಾಸಕಿಯೇ ಕಾರಣ. ಸೀಡಿ ಕೇಸ್‌ಗೆ ಸಿಬಿಐ ತನಿಖೆಯೊಂದೇ ಪರಿಹಾರ. ರಮೇಶ್ ಜಾರಕಿಹೊಳಿ ನಿವೃತ್ತಿಗೆ ಜನ ಅವಕಾಶ ಕೊಡಲ್ಲ. ಸಿಬಿಐ ತನಿಖೆಯಾದರೆ ಲಂಚ, ಮಂಚ ಎಲ್ಲ ಹೊರಗೆ ಬರಲಿದೆ ಎಂದರು.
ಬೆಳಗಾವಿ ಜಿಲ್ಲೆಯ 18ಕ್ಕೆ 18 ಕ್ಷೇತ್ರ ಗೆಲ್ಲುವುದೇ ನಮ್ಮ ಗುರಿ: ಸಿ.ಟಿ.ರವಿ
ಹೆಬ್ಬಾಳ್ಕರ್ ಮಟ್ಯಾಷ್ ಲೆಗ್, ರಕ್ತ ಕಣ್ಣೀರು!: ಶಾಸಕ ರಮೇಶ್ ಜಾರಕಿಹೊಳಿ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಷಕನ್ಯೆ ಎಂದು ಹೇಳಿದ ವಿಚಾರ ಪ್ರಸ್ತಾಪಿಸಿದ ಅವರು, ಆಕೆ ವಿಷಕನ್ಯೆ ಅಷ್ಟೇ ಅಲ್ಲ, ಮಟ್ಯಾಷ್ ಲೆಗ್ ಮತ್ತು ರಕ್ತಕಣ್ಣೀರು ಎಂದು ಬೆಳಗಾವಿ ಜನರೇ ಮಾತನಾಡುತ್ತಾರೆ. ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮೊದಲಿನಿಂದಲೂ ಇದೆ. ಚುನಾವಣೆಗೆ ಆರು ತಿಂಗಳು ಇರುತ್ತಲೇ ಜೋರಾಗಿರುತ್ತದೆ. ಆ ಮಟ್ಯಾಷ್ ಲೆಗ್‌ನಿಂದ ಸಿದ್ದರಾಮಯ್ಯ ಮಾಜಿ ಆದರು. ಕುಮಾರಸ್ವಾಮಿ ಸರ್ಕಾರ ಹೋಯಿತು. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಾನು ಕಾಂಗ್ರೆಸ್‌ನಿಂದ ದೂರವಾದೆ ಎಂದರು.