ಇಂದು ನಾಳೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ಅ.23) ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿರಲಿದ್ದು, ಮುಂಜಾನೆ ಮಂಜು ಆವರಿಸಿದ ವಾತಾವರಣ ಇರಲಿದೆ. ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ 'ತೇಜ್' ಚ೦ಡ ಮಾರುತದಿಂದ ರಾಜ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿಸಿರುವ ಹವಾಮಾನ ಇಲಾಖೆ, ಇಂದು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಯಾದಗಿರಿ: ಬೆಳೆಗೆ ಟ್ಯಾಂಕರ್ ನೀರಿಗೆ ಮೊರೆ ಹೋದ ರೈತರು..!