ಮೋದಿ ಸರ್ಕಾರವು ಕರ್ನಾಟಕಕ್ಕೆ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳು ಮತ್ತು ಒಂದು ನವೋದಯ ವಿದ್ಯಾಲಯ ಸ್ಥಾಪಿಸಲು ಒಪ್ಪಿಗೆ ನೀಡಿದೆ. ಯಾದಗಿರಿ, ಚಿತ್ರದುರ್ಗ, ರಾಯಚೂರು ಮತ್ತು ಬಳ್ಳಾರಿಯಲ್ಲಿ ಈ ಶಾಲೆಗಳು ತಲೆ ಎತ್ತುತ್ತವೆ.

ಬೆಂಗಳೂರು (ಡಿ.6): ನರೇಂದ್ರ ಮೋದಿ ಸರ್ಕಾರ ಕರ್ನಾಟಕ್ಕೆ ಗುಡ್‌ ನ್ಯೂಸ್‌ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೂಡ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನವಾಗಿದೆ. ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ.

ಕರ್ನಾಟಕದ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳು ಯಾದಗಿರಿ, ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸ್ಥಾಪನೆಯಾಗಲಿದೆ. ಯಾದಗಿರಿ ಜಿಲ್ಲೆಯ ಮುದ್ನಾಳ್‌ ಗ್ರಾಮದಲ್ಲಿ, ಚಿತ್ರದುರ್ಗದ ಕುಂಚಿಗನಾಳ್ ಗ್ರಾಮ ಹಾಗೂ ರಾಯಚೂರಿನ ಸಿಂಧನೂರು ತಾಲೂಕಿನ ಎಳರಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ನಿರ್ಮಾಣವಾಗಲಿದೆ. ಅದರೊಂದಿಗೆ ಕರ್ನಾಟಕ ಕ್ಕೆ ಒಂದು ಹೊಸ ನವೋದಯ ವಿದ್ಯಾಲಯ ಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಳ್ಳಾರಿಯಲ್ಲಿ ನವೋದಯ ವಿದ್ಯಾಲಯ ನಿರ್ಮಾಣವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

20 ದಿನಗಳಲ್ಲೇ ಶಬರಿಮಲೆಯಲ್ಲಿ 60 ಕೋಟಿ ಮೌಲ್ಯದ ಅಪ್ಪಂ, ಅರವಣ ಮಾರಾಟ!

ಕೇಂದ್ರ ಸಂಪುಟ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಅನುಮೋದನೆ ನೀಡಿದೆ. ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ತಿಳಿಸಿದೆ. ದೇಶದಾದ್ಯಂತ 28 ಹೊಸ ನವೋದಯ ವಿದ್ಯಾಲಯಗಳನ್ನು (NVs) ಸ್ಥಾಪಿಸಲು ಕ್ಯಾಬಿನೆಟ್ ಅನುಮೋದಿಸಿದೆ. ನವೋದಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿದೆ.

Mangaluru: ಕೆಟ್ಟಿದ್ದ ಫ್ರಿಜ್‌ ಸರಿ ಮಾಡಲು ಬಂದು ಶೀಲ ಹಾಳು ಮಾಡಿದ ಶಫೀನ್‌

ಕರ್ನಾಟಕದಲ್ಲಿ ನಿರ್ಮಾಣವಾಗಲಿರುವ ಕೇಂದ್ರೀಯ ವಿದ್ಯಾಲಯಗಳು/ವಿಸ್ತರಣೆಗಳು

ಚಿತ್ರದುರ್ಗಕುಂಚಿಗನಾಳ್ ಗ್ರಾಮ
ರಾಯಚೂರುಎಳರಗಿ ಗ್ರಾಮ
ಯಾದಗಿರಿಮುದ್ನಾಳ್‌ ಗ್ರಾಮ
ಶಿವಮೊಗ್ಗಈಗಿರುವ ಕೇಂದ್ರೀಯ ವಿದ್ಯಾಲಯ ವಿಸ್ತರಣೆ