ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 

ಬೆಳಗಾವಿ (ಫೆ.21): ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದರು.

ಎರಡು ವಾರದಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್‌: ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ ಎಂದರು. ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಹೆಬ್ಬಾಳಕರ್ ಹೇಳಿದರು.

ಸಿಎಂ ಸಿದ್ದರಾಮಯ್ಯ 14 ಸೈಟ್ ಯಾಕೆ ವಾಪಸ್ ಕೊಟ್ಟರು?: ಶಾಸಕ ಟಿ.ಎಸ್‌.ಶ್ರೀವತ್ಸ

ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಹಣ: ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.