Asianet Suvarna News Asianet Suvarna News

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಕರಾವಳಿಗೆ ರೆಡ್ , 4 ಜಿಲ್ಲೆಗೆ ಆರೇಂಜ್ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಚುರುಕೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ರಾಜ್ಯಕ್ಕೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ದರೆ, ನಾಲ್ಕು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ.

Monsoon Alert IMD forecast Heavy rain fall in Karnataka Red alert in Costal districts ckm
Author
First Published Jun 22, 2024, 8:44 AM IST | Last Updated Jun 22, 2024, 8:44 AM IST

ಬೆಂಗಳೂರು(ಜೂ.22) ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಮುಂಗಾರು ಚುರುಕುಕೊಂಡ ಬೆನ್ನಲ್ಲೇ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 23ರಿಂದ ಭಾರಿ ಮಳೆಯಾಗಲಿದೆ. ಹೀಗಾಗಿ ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದೇ ವೇಳೆ ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಜೂ.24ರಂದು ಭಾರಿ ಮಳೆ  ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಾಗವಿ ಸೇರಿದಂತೆ ಉತ್ತರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಭಾರೀ ಮಳೆಯಾದರೂ ಕರ್ನಾಟಕದಲ್ಲಿ ಬಿತ್ತನೆ 20% ಕುಂಠಿತ..!

ಈಗಾಗಲೇ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಪೈಕಿ ಬೆಂಗಳೂರಿನ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಂತರಗಳಲ್ಲೂ ಭಾರಿ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಹೇಳಿದೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ, ಕೆಲೆವೆಡೆ ಸಾಧಾರಣ ಮಳೆಯಾಗಿದೆ. ಆದರೆ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದಿದೆ.

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪೈಕಿ 
ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.  ನಿನ್ನೆ ಕರಾವಳಿ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಿದೆ. ಇದು ಜೂನ್ 25ರ ವರೆಗೆ ಭಾರಿ ಮಳೆ ಮುಂದುವರಿಯಲಿದೆ.  ಕರಾವಳಿಯಲ್ಲಿ ಜೂ.22ರಂದು ಆರೆಂಜ್‌ ಹಾಗೂ ಜೂ.23 ಮತ್ತು 24ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  

ಈ ಬಾರಿ ಮುಂಗಾರು ಪ್ರವೇಶ ಕೊಂಚ ಬೇಗವಾಗಿದ್ದರೂ ಜೂನ್ ತಿಂಗಳಲ್ಲಿ ಮಳೆ ಕೊರತೆ ಕಾಡಲಿದೆ ಎಂದು ಇಲಾಖೆ ಸೂಚಿಸಿದೆ. ದೇಶದಲ್ಲಿ ಸರಾಸರಿ ಮಳೆ ಪ್ರಮಾಣದಲ್ಲಿ ಶೇಕಡಾ 20 ರಷ್ಟು ಕೊರತೆಯಾಗಿದೆ ಎಂದು ಹಾವಾಮಾನ ಇಲಾಖೆ ಹೇಳಿದೆ. ಜೂ.1ರಿಂದ 18ರೊಳಗೆ 64.5 ಮಿ.ಮೀ ಮಳೆಯಾಗುವ ಮೂಲಕ ಶೇ.20ರಷ್ಟು ಕೊರತೆಯಾಗಿದೆ. ಉತ್ತರ ಭಾರತದ ಹಲವೆಡೆ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಆದರೆ ದಕ್ಷಿಣ ಭಾರತದಲ್ಲಿ 106.6 ಮಿ.ಮೀ ಮಳೆಯಾಗುವ ಮೂಲಕ ಶೇ.16ರಷ್ಟು ಅಧಿಕ ಮಳೆಯಾಗಿದೆ.

ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ
 

Latest Videos
Follow Us:
Download App:
  • android
  • ios