ಕರ್ನಾಟಕಕ್ಕೆ ಮುಂಗಾರು ಪ್ರವೇಶ: ಮಳೆ ಶುರು

ಮುಂಗಾರು ಮಾರುತಗಳು ಅಷ್ಟೊಂದು ಪ್ರಬಲವಾಗಿಲ್ಲ. ಕೇರಳದಲ್ಲಿಯೂ ಮಳೆ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಎರಡೂರು ದಿನದಲ್ಲಿ ಮಾರುತಗಳು ಪ್ರಬಲವಾಗಲಿವೆ. ಆಗ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. 

Monsoon Rain Arrived to Karnataka grg

ಬೆಂಗಳೂರು(ಜೂ.01): ರಾಜ್ಯದ ಗಡಿ ಜಿಲ್ಲೆಗಳಿಗೆ ಈಗಾಗಲೇ ಮುಂಗಾರು ಪ್ರವೇಶಿಸಿದೆ. ಈ ಬಗ್ಗೆ ಒಂದೆರಡು ದಿನದಲ್ಲಿ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದೆ. ಮೇ 31ರಂದು ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 

ಮುಂಗಾರು ಪ್ರವೇಶದ ಘೋಷಣೆಗೆ ಕೆಲವು ಮಾನದಂಡಗಳನ್ನು ಹವಾಮಾನ ಇಲಾಖೆ ಪರಿಶೀಲಿಸುತ್ತಿದೆ. ಜೂ.1 ಅಥವಾ 2 ರಂದು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಹವಾಮಾನ ಇಲಾಖೆಯ ತಜ್ಞರು ಮಾಹಿತಿ ನೀಡಿದ್ದಾರೆ.

ಕೇರಳ, ಈಶಾನ್ಯಕ್ಕೆ ಒಟ್ಟಿಗೇ ಬಂದ ಮುಂಗಾರು: ಈ ವರ್ಷ ಮಳೆ ಹೇಗಿರಲಿದೆ?

ಮುಂಗಾರು ಮಾರುತಗಳು ಅಷ್ಟೊಂದು ಪ್ರಬಲವಾಗಿಲ್ಲ. ಕೇರಳದಲ್ಲಿಯೂ ಮಳೆ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಎರಡೂರು ದಿನದಲ್ಲಿ ಮಾರುತಗಳು ಪ್ರಬಲವಾಗಲಿವೆ. ಆಗ ಉತ್ತಮ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಜೂ.2ಕ್ಕೆ 9 ಜಿಲ್ಲೆಗೆ ಯೆಲ್ಲೋ ಅಲರ್ಟ್: 

ಜೂ.1 ರಿಂದಲೇ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಜೂ.2 ರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರಂಭಗೊಳ್ಳಲಿದೆ. ಅಲ್ಲಿಂದ ಒಂದು ವಾರ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಜೂ.2 ಮತ್ತು 3ಕ್ಕೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಕೊಡಗು ಸೇರಿ 9 ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ.ವರೆಗೆ ಮಳೆ ಯಾಗುವ ಸಾಧ್ಯತೆ ಇದ್ದು ಜೂನ್ 2ಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

Latest Videos
Follow Us:
Download App:
  • android
  • ios