Asianet Suvarna News Asianet Suvarna News

ರಾಜ್ಯದಲ್ಲಿ ಬಿಟ್ಟೂ ಬಿಡದೆ ಸುರಿಯುತ್ತಿರುವ ಮುಂಗಾರು ಮಳೆ: ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಮತ್ತು ಯೆಲ್ಲೋ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಕೊಡಲಾಗಿದೆ. 

Monsoon rains incessant in the state Alert announced by Meteorological Department gvd
Author
First Published Jul 28, 2024, 9:52 AM IST | Last Updated Jul 29, 2024, 12:15 PM IST

ಬೆಂಗಳೂರು (ಜು.28): ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂದಿನ 48 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಸ್ಥಳಗಳಿಗೆ ಅಲರ್ಟ್ ಘೋಷಿಸಿದೆ. 

ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಮತ್ತು ಯೆಲ್ಲೋ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಇಂದು ಯೆಲ್ಲೋ ಮತ್ತು ನಾಳೆ ಆರೆಂಜ್ ಅಲರ್ಟ್ , ಕೊಡಗು ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಎರಡು ದಿನ ಯೆಲ್ಲೋ ಮತ್ತು ಕಲ್ಬುರ್ಗಿ ಮತ್ತು ಬೀದರ್ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಭೈರಪ್ಪನವರಂತಹ ಲೇಖಕರಿಗೂ ಅಂಕಣ ಬರೆಯೋದು ಕಷ್ಟವಾಯ್ತು: ವಿಶ್ವೇಶ್ವರ ಭಟ್

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ. ಅಲ್ಲಿನ ಪ್ರದೇಶದಲ್ಲಿ ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನು ಉಡುಪಿ, ಬೆಳಗಾವಿ, ಬೀದರ್, ಕಲಬುರ್ಗಿ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಉಳಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಸಿಲಿಕಾನ್ ಸಿಟಿಯಲ್ಲಿ ನಿರಂತರ ಗಾಳಿ, ಹಗುರ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಕಂಡು ಬರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ. 

ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ: ನಿನ್ನೆಯಿಂದ ರಾಜ್ಯದಲ್ಲಿ ಅತಿ ಹೆಚ್ಚು ಮಳೆ 16 ಸೆಮೀ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಸುರಿದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ 15, (ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 14 ಸೆಮೀ ದಾಖಲಾಗಿದೆ ಎಂದು ಹವಾಮನ ಇಲಾಖೆ ತಿಳಿಸಿದೆ. 

ಡ್ಯಾಂಗಳಿಂದ ಲಕ್ಷ ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಮುತ್ತತ್ತಿ, ರಂಗನತಿಟ್ಟಿಗೆ ಪ್ರವೇಶ ನಿರ್ಬಂಧ

ಸರಾಸರಿ ಸಮುದ್ರ ಮಟ್ಟದಲ್ಲಿರುವ ಆಫ್-ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್‌ ನಿಂದ ಉತ್ತರ ಕರ್ನಾಟಕ ಕರಾವಳಿಯವರೆಗೆ ಹಾದು ಹೋಗುತ್ತಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗುತ್ತಿದೆ
-ಡಾ.ಎನ್.ಪುವಿಯರಸನ್, ಹಿರಿಯ ವಿಜ್ಞಾನಿ ಬೆಂಗಳೂರು ಹವಾಮಾನ ಕೇಂದ್ರ

Latest Videos
Follow Us:
Download App:
  • android
  • ios