ಜೂನ್ 11 ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ನಿರೀಕ್ಷೆಯಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೂನ್ ಮೊದಲ ವಾರದಲ್ಲಿ ಶೇ.39ರಷ್ಟು ಮಳೆ ಕೊರತೆ ದಾಖಲಾಗಿದೆ.

ಬೆಂಗಳೂರು (ಜೂ.7) : ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿಗದಿತ ಅವಧಿಗಿಂತ ಮೊದಲೇ ಕಾಲಿಟ್ಟು ಮುಂಗಾರು ಆರಂಭದಲ್ಲಿ ಭಾರೀ ಮಳೆ ಸುರಿಸುವ ಮುನ್ಸೂಚನೆ ನೀಡಿತ್ತು. ಆದರೆ ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಇದೀಗ ಸೋಮವಾರದಿಂದ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಜೂ.11 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.

ಮೊದಲ ವಾರ ಶೇ.39 ಮುಂಗಾರು ಕೊರತೆ: ಮೇ ತಿಂಗಳಲ್ಲಿ ದಾಖಲೆ ಮಳೆಯಾದರೆ ಮುಂಗಾರು ಆರಂಭದ ಜೂನ್‌ ಮೊದಲ ವಾರವೇ ಮಳೆ ಕೊರತೆ ಕಾಣಿಸಿಕೊಂಡಿದೆ. ಜೂ.1 ರಿಂದ 4 ವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 18.9 ಮಿ.ಮೀ. ನಷ್ಟು ವಾಡಿಕೆ ಮಳೆಯಾಗಬೇಕು. ಆದರೆ 11.6 ಮಿ.ಮೀ. ಅಷ್ಟೇ ಮಳೆಯಾಗಿದೆ. ಈ ಮೂಲಕ ಶೇ.39ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ