ನೈತಿಕ ಪೊಲೀಸ್‌ಗಿರಿ: ಹಿಂದು ಯುವತಿಯನ್ನ ಕರೆದೊಯ್ದ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ
ಯುವತಿಯನ್ನು ಡ್ರಾಪ್ ಮಾಡಿದ್ದ ಅನ್ಯಕೋಮಿನ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್‌ಗಿರಿ ಘಟನೆ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ತಂಗಡಿ (ಆ.4): ಯುವತಿಯನ್ನು ಡ್ರಾಪ್ ಮಾಡಿದ್ದ ಅನ್ಯಕೋಮಿನ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್‌ಗಿರಿ ಘಟನೆ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ನಿವಾಸಿ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜು ಕೊನೆಗೊಂಡಿದ್ದು, ಬುಧವಾರ ರಾತ್ರಿ ತನ್ನ ಊರಾದ ಬೆಂಗಳೂರಿಗೆ ತೆರಳಲು ಉಜಿರೆಯಿಂದ ಪರಿಚಯಸ್ಥ ಅನ್ಯಕೋಮಿನ ಆಟೋ ಚಾಲಕನ ರಿಕ್ಷಾದಲ್ಲಿ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಪ್ರಯಾಣಿಸಿದ್ದಳು.
ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ಗಡಿಪಾರು: ಸಚಿವ ಗುಂಡೂರಾವ್
ರಾತ್ರಿ 9 ಗಂಟೆಗೆ ಅವಳನ್ನು ಡ್ರಾಪ್ ಮಾಡಿ ಹಿಂದಿರುಗುವಾಗ ಅಪರಿಚಿತ ಯುವಕರ ತಂಡವೊಂದು ರಿಕ್ಷಾ ಚಾಲಕನಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದೆ. ಆಟೋ ಚಾಲಕನನ್ನು ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಮಹಮ್ಮದ್ ಆಸಿಕ್ ಎಂದು ಗುರುತಿಸಲಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ಧರ್ಮಸ್ಥಳ ಸಬ್ ಇನ್‌ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಧರ್ಮಸ್ಥಳ ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಕಳದಲ್ಲಿ ನೈತಿಕ ಪೊಲೀಸ್ ಗಿರಿ: ಕಾರು ಅಡ್ಡಗಟ್ಟಿಬೆದರಿಕೆ
ಕಾರ್ಕಳ: ಮಂಗಳೂರಿನ ಹೆಸರಾಂತ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರಾಧ್ಯಾಪಕರು ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹಿಂದೂ ಸಂಘಟನೆ ಹೆಸರಲ್ಲಿ ಗುಂಪೊಂದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮಾಳ ಎಸ್.ಕೆ. ಬಾರ್ಡರ್ ಸಮೀಪದಿಂದ ವೈದ್ಯರು, ಪ್ರಾಧ್ಯಾಪಕಿಯರು ಪ್ರಯಾಣಿಸುತ್ತಿದ್ದ ಕಾರನ್ನು ಹಿಂಬಾಲಿಸಿಕೊಂಡು ಕಾರಿನಲ್ಲಿ ಬಂದ ಗುಂಪು, ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದರು.
Moral Policing: ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ, ಇಬ್ಬರ ಬಂಧನ
ಕಾರಿನಲ್ಲಿದ್ದ ಮಹಿಳೆಯರು ತಕ್ಷಣ 112ಗೆ ಕರೆ ಮಾಡಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಇವರು ವಿಭಿನ್ನ ಕೋಮಿನವರು ಎಂದು ತಿಳಿದು ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಾದ ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಇವರನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ.