ಹುಂಡಿ ಎಣಿಕೆ ಕಾರ್ಯ, 33 ದಿನಗಳಲ್ಲಿ ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ!
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.90 ಕೋಟಿ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಕಳೆದ 33 ದಿನಗಳ ಅವಧಿಯಲ್ಲಿ ಭಕ್ತರಿಂದ ಸಂಗ್ರಹವಾಗಿರುವ ಕಾಣಿಕೆ. ಮಹದೇಶ್ವರ ಬೆಟ್ಟದಲ್ಲಿ ತಡರಾತ್ರಿವರೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಚಾಮರಾಜನಗರ (ಜ.4): ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.90 ಕೋಟಿ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಕಳೆದ 33 ದಿನಗಳ ಅವಧಿಯಲ್ಲಿ ಭಕ್ತರಿಂದ ಸಂಗ್ರಹವಾಗಿರುವ ಕಾಣಿಕೆ. ಮಹದೇಶ್ವರ ಬೆಟ್ಟದಲ್ಲಿ ತಡರಾತ್ರಿವರೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು.
ನಗದು ರೂಪದಲ್ಲಿ ಒಟ್ಟು 2,99,00,732 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. 13ಲಕ್ಷ ರೂಪಾಯಿ ಗು ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಕಾಣಿಕೆ ಬಂದಿದೆ. ಇನ್ನು 102 ಗ್ರಾಂ ಚಿನ್ನ, 3 ಕೆಜಿ 155 ಗ್ರಾಂ ಬೆಳ್ಳಿ ಕಾಣಿಕೆ ಬಂದಿದೆ. 23 ಯುಎಸ್ಎ ಡಾಲರ್ ಕೆನಡಾದ 100 ಡಾಲರ್ ಓಮನ್ ದೇಶದ 4 ರಿಯಾಲ್ ನೋಟುಗಳು ಸಹ ಕಾಣಿಕೆ ಹುಂಡಿಯಲ್ಲಿ ಪತ್ತೆಯಾಗಿವೆ. ಹುಂಡಿಯಲ್ಲಿ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಬಂದಿವೆ.
ಸಿದ್ದು ಸರ್ಕಾರದ ಯೋಜನೆಯಿಂದ ಈ ವರ್ಷ 50 ಲಕ್ಷ ಮಂದಿ ಭಕ್ತರಿಂದ ಮಹದೇಶ್ವರನ ದರ್ಶನ!
ಕಳೆದ ತಿಂಗಳ 23ದಿನಗಳ ಅವಧಿಯಲ್ಲಿ 2,00,41,724 ರು. ಹುಂಡಿ ಹಣ ಸಂಗ್ರಹವಾಗಿತ್ತು. ಈ ಬಾರಿ ಹೆಚ್ಚಳವಾಗಿದೆ.