ಕರ್ನಾಟಕದಲ್ಲಿ ವರುಣನ ಅಬ್ಬರ, ಚಾರ್ಮಾಡಿ ಘಾಟ್‌ನಲ್ಲಿ ಭೂಕುಸಿತ: ಇನ್ನೂ ನಾಲ್ಕು ದಿನ ಮಳೆ

ಧಾರವಾಡ, ಹಾವೇರಿ, ಗದಗ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಧಾರವಾಡ, ಹಾವೇರಿ, ಗದಗ ಬುಧವಾರ ರಾತ್ರಿಯಿಂದ ಗುರುವಾರ ಮುಂಜಾನೆವರೆಗೂ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಗಾಯಗೊಂಡಿದ್ದು, 27 ಮನೆಗಳಿಗೆ ಹಾನಿಯಾಗಿದೆ. 

More than seven districts of the Karnataka received heavy rain on october 10th grg

ಬೆಂಗಳೂರು(ಅ.11):  ನವರಾತ್ರಿ ಸಂಭ್ರಮದ ನಡುವೆಯೇ ಧಾರವಾಡ ಸೇರಿ ರಾಜ್ಯದ ಏಳಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಮಳೆಯಬ್ಬರ ಮುಂದುವರಿದಿದೆ. ಚಿಕ್ಕಮಗಳೂರಿನಲ್ಲಿ ಭರ್ಜರಿ ಮಳೆಗೆ ಚಾರ್ಮಾಡಿ ಘಾಟ್ ಸುತ್ತಮುತ್ತ ಹಲವೆಡೆ ಸಣ್ಣಪ್ರಮಾಣದ ಭೂ ಕುಸಿತ (ಧರೆ ಕುಸಿತ) ಸಂಭವಿಸಿದೆ. 

ಧಾರವಾಡ, ಹಾವೇರಿ, ಗದಗ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಧಾರವಾಡ, ಹಾವೇರಿ, ಗದಗ ಬುಧವಾರ ರಾತ್ರಿಯಿಂದ ಗುರುವಾರ ಮುಂಜಾನೆವರೆಗೂ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಗಾಯಗೊಂಡಿದ್ದು, 27 ಮನೆಗಳಿಗೆ ಹಾನಿಯಾಗಿದೆ. ಚಾರ್ಮಾಡಿ ಘಾಟ್ ಸುತ್ತಮುತ್ತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಅಲ್ಲಲ್ಲಿ ಸಣ್ಣಪ್ರಮಾಣದ ಭೂಕುಸಿತ ಸಂಭವಿಸಿದೆ. 

Mangaluru: ಭಾರೀ ಮಳೆಗೆ ನೆರಿಯ ಸೇತುವೆ ಮತ್ತೆ ಮುಳುಗಡೆ: ಆತಂಕದಲ್ಲಿ ಜನರು

ರಾಜ್ಯದಲ್ಲಿ 4 ದಿನ ಮಳೆ:  

ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3-4 ದಿನ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಯಲ್ಲಿ ಬಾಗಲ ಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯ ತೆಯಿಂದ 'ಯೆಲ್ಲೋ ಅಲರ್ಟ್' ನೀಡಲಾಗಿದೆ.

Latest Videos
Follow Us:
Download App:
  • android
  • ios