ಬೈಂದೂರಿನ ಮೂಕಾಂಬಿಕಾ ದೇವಸ್ಥಾನದ ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಸದ ರಾಘವೇಂದ್ರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವರು ಈಗಾಗಲೇ ಸ್ಥಳ ಪರಿಶೀಲಿಸಿದ್ದು, ರಾಜ್ಯ ಸರ್ಕಾರ ಜಮೀನು ಹಸ್ತಾಂತರಿಸಿದರೆ ಯೋಜನೆ ಮಂಜೂರಾಗಲಿದೆ. ಒತ್ತಿನೆಣೆಯಲ್ಲಿ 500 ಎಕರೆ ಅರಣ್ಯ ಭೂಮಿ ಲಭ್ಯವಿದೆ. ಕೆಎಸ್ಐಐಡಿಸಿ ಸರ್ವೆ ಕಾರ್ಯ ಪೂರ್ಣಗೊಂಡಿದೆ.

ಶಿವಮೊಗ್ಗ: ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಶೀಘ್ರವಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಮನವಿ ಸಲ್ಲಿಸಿದರು. ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿದ್ದು, ಕರ್ನಾಟಕ ರಾಜ್ಯದಲ್ಲಿ 2ನೇ ಅತೀ ಹೆಚ್ಚು ಆದಾಯ ಗಳಿಸುವ ದೇವಸ್ಥಾನ, ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದರಿಂದ, ಬೈಂದೂರಿನಲ್ಲಿ ವಿಮಾನ ನಿಲ್ದಾಣವನ್ನು ಮಂಜೂರು ಮಾಡಲು ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಸಂಸದ ಬಿ ವೈ. ರಾಘವೇಂದ್ರ ಈ ಹಿಂದೆಯೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟಿಟಿ-ವಿಮಾನ ಡಿಕ್ಕಿ!

ರಾಜ್ಯ ಸರ್ಕಾರದಿಂದ ಜಮೀನು ಹಸ್ತಾಂತರ, ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಬಂದಲ್ಲಿ ಶೀಘ್ರ ವಿಮಾನ ನಿಲ್ದಾಣ ಮಂಜೂರು ಮಾಡುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರು ತಿಳಿಸಿರುವ ಹಿನ್ನೆಲೆ ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತಿ ಸಮೀಪವಿರುವ ಒತ್ತಿನೆಣೆಯಲ್ಲಿ 500 ಎಕರೆಗೂ ಅಧಿಕ ಅರಣ್ಯ ಇಲಾಖೆಯ ವಿಸ್ತರಣಾ ಬ್ಲಾಕ್ ನ ಸ್ಥಳ ಲಭ್ಯವಿದ್ದು, ಅಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಿದರೆ ಭಕ್ತಾಧಿಗಳಿಗೆ ಅನುಕೂಲ, ಈಗಾಗಲೇ ಕೆಎಸ್ಐಐಡಿಸಿಯಿಂದ ಸರ್ವೆ ಕಾರ್ಯ ನಡೆದು ಉಡುಪಿ ಜಿಲ್ಲಾಧಿಕಾರಿಗಳಿಂದ ದಾಖಲೆ ಪಡೆದುಕೊಳ್ಳಲಾಗಿದ್ದು, ಆದಷ್ಟು ಬೇಗ ವಿಮಾನ ನಿಲ್ದಾಣಕ್ಕೆ ಶೀಘ್ರ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಬಿ.ವೈ ರಾಘವೇಂದ್ರ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅವರೊಂದಿಗೆ ವಿವರವಾಗಿ ಚರ್ಚಿಸಿ ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ಜಮೀನು ಹಸ್ತಾಂತರ ಹಾಗೂ ಅಗತ್ಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ!

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸುಧಾರಿತ ಟ್ರಕ್‌ ನಿರ್ವಹಣಾ ವ್ಯವಸ್ಥೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ನಲ್ಲಿ ಸರಕು ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಶೆಲ್‌ ಮೊಬಿಲಿಟಿ ಇಂಡಿಯ ಸಹಭಾಗಿತ್ವದಲ್ಲಿ ಸುಧಾರಿತ ಟ್ರಕ್‌ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್‌ ಮಾತನಾಡಿ, ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ನಲ್ಲಿ ಬೇಡಿಕೆ ಹೆಚ್ಚಾದಂತೆ ಸರಕುಗಳ ನಿರ್ವಹಣೆ ಸವಾಲಾಗಿತ್ತು. ಇದೀಗ ಶೆಲ್‌ ಮೊಬಿಲಿಟಿ ಇಂಡಿಯಾದೊಂದಿಗೆ ವಿಮಾನ ನಿಲ್ದಾಣ ಅಧಿಕಾರಿಗಳು ಒಪ್ಪಂದ ಮಾಡಿಕೊಂಡು, ಟ್ರಕ್‌ ನಿರ್ವಹಣಾ ಸೌಲಭ್ಯವನ್ನು ಅಳವಡಿಸಿಕೊಂಡ ಮೊದಲ ವಿಮಾನ ನಿಲ್ದಾಣವಾಗಿದೆ. ಈ ನೂತನ ವ್ಯವಸ್ಥೆ ಮೂಲಕ ಟ್ರಕ್‌ ನಿರ್ವಹಣಾ ಸೌಲಭ್ಯ ಮತ್ತು ಸರಕು ಟರ್ಮಿನಲ್‌ನಲ್ಲಿ ಸಂಪೂರ್ಣ ಸ್ವಯಂಚಾಲಿತ ಹಾಗೂ ಕಾಗದ ರಹಿತ ಟ್ರಕ್‌ ಪ್ರವೇಶ ಮತ್ತು ನಿರ್ಗಮನ ಪ್ರಕ್ರಿಯೆ ನಡೆಯಲಿದೆ. ಇದು ಸರಕು ಸಾಗಣೆಯಲ್ಲಿ ವೇಗ ಮಿತಿ ಹೊಂದಲಿದ್ದು ಯಾವುದೇ ದಟ್ಟಣೆಗೆ ಕಾರಣವಾಗುವುದಿಲ್ಲ ಎಂದು ಹೇಳಿದರು.