ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಸೆ.27): ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ತಿರುಗೇಟು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಡಾ ಪ್ರಕರಣದ ಕುರಿತು ಹರಿಯಾಣ ಚುನಾವಣಾ ಪ್ರಚಾರದ ವೇಳೆ ಮೋದಿ ಉಲ್ಲೇಖಿಸಿರುವುದು ಹಾಗೂ ಬಿಜೆಪಿ ನಾಯಕರು ಕೇಳಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ರಾಜೀನಾಮೆ ಎಚ್.ಡಿ.ಕುಮಾರಸ್ವಾಮಿಯವರು ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ನೀಡಿದ್ದಾರಾ? ಅವರು ರಾಜೀನಾಮೆ ನೀಡದೆ ಸರ್ಕಾರದಲ್ಲಿ ಮುಂದುವರೆದರೆ ಅವರ ಸರ್ಕಾರಕ್ಕೆ ಮುಜುಗರ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ನಾನ್ಯಾಕೆ ರಾಜೀನಾಮೆ ಕೊಡಲಿ, ನಾನು ಯಾವ ತಪ್ಪು ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಅಲ್ಲದೆ, ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನಾನು ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಡಿ.ಕೆ.ಶಿವಕುಮಾರ್ ಸಹ ಪ್ರತಿಕ್ರಿಯೆ ನೀಡಿದು ಪ್ರಧಾನಿ ಮೋದಿಯವರು ಚುನಾ ವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪಿಸುವ ಮೂಲಕ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಅವರ ಸರ್ಕಾರದ ಸಚಿವರು