Asianet Suvarna News Asianet Suvarna News

ಸಿಎಂ ಪರ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬ್ಯಾಟಿಂಗ್: ಕಳ್ಳರು ಕಳ್ಳರು ಒಂದಾಗಿದ್ದಾರೆ: ಸ್ನೇಹಮಯಿ ಕೃಷ್ಣ ವ್ಯಂಗ್ಯ

ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯರ ಪರ ಮಾತನಾಡಿದ್ದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿಚಾರವಾಗಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿದ್ದು, 'ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

Muda case: Snehamayi krishna reacts about jds mla gt devegowda statement about cm siddaramaia rav
Author
First Published Oct 4, 2024, 4:01 PM IST | Last Updated Oct 4, 2024, 6:29 PM IST

ಮೈಸೂರು (ಅ.4) ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯರ ಪರ ಮಾತನಾಡಿದ್ದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿಚಾರವಾಗಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿದ್ದು, 'ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು,  ಜಿಟಿ ದೇವೇಗೌಡ ಸಹ ಇದರಲ್ಲಿ ಫಿಫ್ಟಿ ಫಿಫ್ಟಿ ಭಾಗಿಯಾಗಿದ್ದಾರೆ. ಇದೀಗ ತನಿಖೆಯ ಭಯದಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇವರಷ್ಟೇ ಅಲ್ಲ, ಇನ್ನು ಕೆಲವು ದಿನಗಳಲ್ಲಿ ಮತ್ತೊಂದಿಷ್ಟು ಜನ ಇವರೊಂದಿಗೆ ಸೇರುತ್ತಾರೆ ಎಂದು ಕಿಡಿಕಾರಿದ್ದಾರೆ.

ದಸರಾ ಚಾಲನೆ ವೇಳೆ ಚಾಮುಂಡೇಶ್ವರಿಗೆ ಅಪಮಾನ; ರಾಜಕೀಯ ಭಾಷಣ ಮಾಡಿದ ಸಾಹಿತಿ ಹಂಪನಾ ವಿರುದ್ಧ ಆರ್ ಅಶೋಕ್ ಗರಂ

ಮುಡಾ ಹಗರಣದಲ್ಲಿ ಕಳ್ಳರು ಕಳ್ಳರು ಒಂದಾಗಿ ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ. ಈ ಕೂಟ ನನ್ನ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಜಿಟಿ ದೇವೇಗೌಡರು 3 ತಿಂಗಳಿನಿಂದ ಏನು ಮಾಡ್ತಿದ್ರು? ದಸರಾ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು. ಮುಡಾದಲ್ಲಿ ಜಿಟಿ ದೇವೇಗೌಡರದು ಸಹ ಅಕ್ರಮ ಇರಬಹುದು. ಇದೇ ಕಾರಣಕ್ಕೆ ಇದ್ದಕ್ಕಿದ್ದಂತೆ ಒಂದಾಗಿದ್ದಾರೆ ಎಂದರು.

ಪಾಪದ ಕೊಡ ತುಂಬಿದಾಗ ಈ ಸರ್ಕಾರ ತಾನಾಗೇ ಬೀಳುತ್ತೆ..' ಸಚಿವ ಎನ್ಎಸ್ ಬೋಸರಾಜುಗೆ ಆರ್ ಅಶೋಕ್ ತಿರುಗೇಟು

ಸೆಟಲ್ ಮೆಂಟ್ ಡೀಡ್ ಮೂಲಕ ಮುಡಾದಲ್ಲಿ ಅಕ್ರಮ ಆಗಿದೆ. ಆ ಬಗ್ಗೆಯೂ ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದೇನೆ. ಹೆಚ್.ಸಿ ಮಹದೇವಪ್ಪ ಸಹೋದರನ ಮಗನಿಗೆ ಸೆಟಲ್ಮೆಂಟ್ ಡೀಡ್ ಮೂಲಕ ಕೊಡಲಾಗಿದೆ ಎಂಬ ಮಾಹಿತಿಯಿದೆ. ಮರಿಗೌಡ ಸಹೋದರನಿಗೂ ಶಿವಣ್ಣನಿಗೂ ಸೆಟಲ್ಮೆಂಟ್ ಡೀಡ್ ಮೂಲಕ ಸೈಟು ಕೊಡಲಾಗಿದೆ. ಎಲ್ಲದರ ಬಗ್ಗೆಯೂ ಇಡಿಗೆ ಮಾಹಿತಿ ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರೂ ಕಳ್ಳರ ಬಣ್ಣವೂ ಬಯಲಾಗಲಿದೆ ಎಂದರು.

Latest Videos
Follow Us:
Download App:
  • android
  • ios