ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ 'ಬಿ' ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಈ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಲಿದೆ.

ಬೆಂಗಳೂರು (ಅ.8): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಲೋಕಾಯುಕ್ತ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಮತ್ತು ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ತೀರ್ಪು ಪ್ರಕಟಿಸಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಈ ಅರ್ಜಿ ಕುರಿತು ಸೆ.29ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಈ ಸಂಬಂಧ ಅ.8ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ಮುಡಾ ಪ್ರಕರಣ ವಿಚಾರಣೆ ಅಕ್ಟೋಬರ್ 8ಕ್ಕೆ ಮುಂದೂಡಿಕೆ, ದಿನೇಶ್ ಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಸಿದ್ದರಾಮಯ್ಯ ಕುಟುಂಬವು ಮುಡಾದಿಂದ ಅಕ್ರಮವಾಗಿ 14 ನಿವೇಶನ ಪಡೆದಿದೆ. ಆದರೆ, ಲೋಕಾಯುಕ್ತ ತನಿಖಾಧಿಕಾರಿ ಸರಿಯಾದ ತನಿಖೆ ನಡೆಸದೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಆರೋಪಿಗಳ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಈ ‘ಬಿ’ ರಿಪೋರ್ಟ್‌ ತಿರಸ್ಕರಿಸಬೇಕು. ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ದೂರುದಾರ ಸ್ನೇಹಮಯಿ ಮನವಿ ಮಾಡಿದ್ದರು.