ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಮತ್ತೊಂದು ದೂರು

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಮುಡಾ ನಿಂದ ಅಕ್ರಮವಾಗಿ 14 ಸೈಟ್ ಹಂಚಿಕೆ ವಿಚಾರದ ಕುರಿತು ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ್ದಾರೆ.

Muda scam Another complaint against CM Siddaramaiah and Karnataka Govt sat

ಬೆಂಗಳೂರು (ಸೆ.09): ರಾಜ್ಯದಲ್ಲಿ ಈಗಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ಮಾಡಿದ್ದಾರೆಂಬ ಆರೋಪದಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ಕೊಟ್ಟಿದ್ದಾರೆ.

ಹೌದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಅಕ್ರಮವಾಗಿ 14 ಸೈಟ್ ಹಂಚಿಕೆ ವಿಚಾರದ ಕುರಿತು ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮತ್ತೊಮ್ಮೆ ದೂರು ನೀಡಿದ್ದಾರೆ. 2023ರ ನ.03 ರಂದು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ವರದಿಯನ್ನು ಮುಚ್ಚಿಡಲಾಗಿದೆ ಎಂದು ನೇರವಾಗಿ ಸಿಎಂ ವಿರುದ್ಧ ಆರೋಪ ಮಾಡಿದ್ದಾರೆ. ಈ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರಿ ಅಧಿಕಾರಿಗಳು ಹಿಂಪಡೆದುಕೊಳ್ಳದೇ ಸುಮ್ಮನಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಭೀಮ ಸಿನಿಮಾದ ವಿಲನ್ ಬ್ಲಾಕ್ ಡ್ರ್ಯಾಗನ್ ಮಂಜು ವಿದ್ಯಾರ್ಹತೆ, ಅಮ್ಮ ಮಾಡುತ್ತಿದ್ದ ಕೆಲಸವೇನು ಗೊತ್ತಾ?

ಇನ್ನು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ವರದಿ ಮುಚ್ಚಿಟ್ಟು ರಾಜ್ಯಪಾಲರಿಗೆ ಬೇರೊಂದು ವರದಿ ನೀಡಲಾಗಿದ್ದು, ಸರ್ಕಾರದ ಈ ಹಿಂದಿನ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಪ್ರಸ್ತುತ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಕ್ರಮ ಕೈಗೊಳ್ಳುವಂತೆ ನೇರವಾಗಿ ದೂರು ನೀಡಿ ಆಗ್ರಹ ಮಾಡಿದ್ದಾರೆ. ಸರ್ಕಾರದ ಸ್ವತ್ತು ರಕ್ಷಿಸುವ ಬದಲು ರಾಜಕಾರಣಿಗಳ ಪರವಾಗಿ ಹಿರಿಯ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ರಾಜಪಾಲಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಡಾ ಹಗರಣದ ಬಗ್ಗೆ ದೂರು ನೀಡಿದ ನಂತರ ರಾಜ್ಯಪಾಲರಿಗೆ ಸರ್ಕಾರದಿಂದ 2024ರ ಜುಲೈ27ರಂದು ರಾಜ್ಯಪಾಲರಿಗೆ ನೀಡಿರುವ ವರದಿಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಮುಚ್ಚಿಡಲಾಗಿದೆ. ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಕಾನೂನು ಬಾಹಿರ ಎಂದು ಉಲ್ಲೇಖಿಸಲಾಗಿದೆ. ಆದರೆ, ಈಗ ಹಿಂದಿನ ಮುಡಾ ಅಧ್ಯಕ್ಷ ದಿನೇಶ್  ಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಆದರೆ, ಅಕ್ರಮವಾಗಿ ನೀಡಿರುವ ಸೈಟ್ ಹಿಂಪಡೆಯದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

Latest Videos
Follow Us:
Download App:
  • android
  • ios