ಮುಡಾ ಹಗರಣದಲ್ಲಿ ಹೈಕೋರ್ಟ್ ತೀರ್ಪು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಹೈಕೋರ್ಟ್‌ನಿಂದ ಮುಡಾ ಹಗರಣದ ತನಿಖೆ ಎದುರಿಸುವಂತೆ ಆದೇಶ ಬಂದಿದೆ. ನೈತಿಕ ಹೊಣೆಗಾರಿಕೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರು (ಸೆ.24): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ನೋಟಿಸ್ ನೀಡಿದ್ದರೂ, ಅದರ ವಿರುದ್ಧ ಹೈಕೋರ್ಟ್‌ಗೆ ಹೋಗಿದ್ದರು. ಇದೀಗ ಹೈಕೋರ್ಟ್‌ನಿಂದಲೇ ಮುಡಾ ಹಗರಣದ ತನಿಖೆ ಎದುರಿಸುವಂತೆ ಆದೇಶ ಬಂದಿದೆ. ಇದೀಗ ನೈತಿಕ ಹೊಣೆಗಾರಿಕೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಕಳೆದೆ ಕೆಲ ತಿಂಗಳಿಂದ ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದ್ದೆವು. ವಾಲ್ಮೀಕಿ ನಿಗಮದ ಹಗರಣ, ಮೈಸೂರು ಮುಡಾ ಹಗರಣ ಸ್ವಲ್ಪ ಸಿಎಂ ಕುಟುಂಬವೇ ಭಾಗಿ ಆಗಿರುವ ಪ್ರಕರಣ. ಅವರ ಕುಟುಂಬದವರೇ ಫಲಾನುಭವಿ ಆಗಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿದ್ದೆವು. ಬೆಂಗಳೂರು ಇಂದ ಮೈಸೂರು ಪಾದಯಾತ್ರೆ ಮಾಡಿದ್ದೇವೆ. ಬಿಜೆಪಿ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡಿದ್ದೆವು. ಇದೀಗ ನಮ್ಮ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ಇದಾದ ಬಳಿಕ ಅನೇಕ ಖಾಸಗಿ ವ್ಯಕ್ತಿಗಳು ಖಾಸಗಿ ದೂರು ನೀಡಿದ್ದರು ಎಂದು ಮಾಹಿತಿ ನೀಡಿದರು.
Breaking: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯ ಶಾಕ್; ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!
ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ಮಾಹಿತಿ ಕಲೆ ಹಾಕಿ , ರಾಜ್ಯಪಾಲರ ವಿರುದ್ಧ ಅನುಮತಿಯನ್ನು ನೀಡಿದ್ದರು. ಕಾಂಗ್ರೆಸ್ ನಾಯಕರು ಬೊಬ್ಬೆ ಹಾಕಿದ್ದರು. ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದರು. ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಆದರೆ, ಹೈಕೋರ್ಟ್ ಇಂದು ತೀರ್ಪು ನೀಡಿದೆ. ಸುಧೀರ್ಘ ಚರ್ಚೆ ಆಗಿದೆ. ಸುಧೀರ್ಘ ವಾದದ ಬಳಿಕ ಹೈಕೋರ್ಟ್ ಇಂದು ತೀರ್ಪು ಬಂದಿದೆ. ಈ ತೀರ್ಪಿನಲ್ಲಿ ಉಲ್ಲೇಖ ಮಾಡಿದೆ. ರಾಜ್ಯಪಾಲರು ನೀಡಿದ ಅನುಮತಿ ಸರಿ ಇದೆ. ಇದು ಕಾನೂನು ಬದ್ಧ ಮತ್ತು ಕ್ರಮ ಬದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ ಎಂದು ತಿಳಿಸಿದರು.
ಕಾನೂನು ಎದುರು ಎಲ್ಲಾರೂ ಒಂದೇ ಎಂದು ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಅವರಲ್ಲಿ ಆಗ್ರಹ ಮಾಡುತ್ತಾರೆ. ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದು ಬದಿಗಿಡಿ. ಕೋರ್ಟ್ ತೀರ್ಪು ಗೌರವಿಸಿ. ಮುಖ್ಯಮಂತ್ರಿಗಳ ಮೇಲೆ ಆರೋಪ ಬಂದಿದೆ. ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಮುಂದಿನ ಹೋರಾಟದ ಬಗ್ಗೆ ಕುಳಿತು ಚರ್ಚೆ ಮಾಡುತ್ತೇವೆ. ಇಂದು ತೀರ್ಪು ಬಂದಿದೆ. ರಾಜ್ಯದ ಹಿತದೃಷ್ಟಿಯಿಂದ ರಾಜೀನಾಮೆ ನೀಡಿ. ಭ್ರಷ್ಟಾಚಾರದ ಕಳಂಕ ಬಂದಿದೆ. ಹೀಗಾಗಿ ರಾಜೀನಾಮೆ ನೀಡಿ. ಯಡಿಯೂರಪ್ಪ ವಿರುದ್ಧ ಆರೋಪ ಬಂದಾಗ ಅವರು ರಾಜೀನಾಮೆ ನೀಡಿದ್ದರು. ಕೋರ್ಟ್ ನಲ್ಲಿ ಕೇಸ್ ಕೂಡ ಗೆಲುವಾಗಿದೆ. ಎರಡು ಮೂರು ತಿಂಗಳು ವಾರದ ಪ್ರಶ್ನೆ ಅಲ್ಲ. ಸಿಎಂ ತಕ್ಷಣ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಮಾಡಿದರು.