Asianet Suvarna News Asianet Suvarna News

ರಾಜ್ಯಪಾಲರ ವಿರುದ್ಧ ಕುರುಬ ಸಮುದಾಯ ಆಕ್ರೋಶ, ಮೈಸೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕುರುಬ ಸಮುದಾಯವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮೈಸೂರಿನಲ್ಲಿ ಪ್ರತಿಭಟನಾಕಾರರು ರಾಜ್ಯಪಾಲರನ್ನು ಕೇಂದ್ರ ಸರ್ಕಾರದ ಏಜೆಂಟ್ ಎಂದು ಕರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

MUDA  scam prosecution against CM Siddaramaiah Kuruba community protest against governor gow
Author
First Published Aug 17, 2024, 1:08 PM IST | Last Updated Aug 17, 2024, 1:08 PM IST

ಬೆಂಗಳೂರು (ಆ.17): ಮೈಸೂರಿನ ಮುಡಾದಿಂದ ಅಕ್ರಮವಾಗಿ 14 ಸೈಟ್ ಪಡೆದುಕೊಂಡ ಆರೋಪದ ಮೇಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಟಿಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್ ಎಂಬ ಮೂವರು ದೂರಿನ ಹಿನ್ನೆಲೆ  ಮುಖ್ಯಮಂತ್ರಿಗಳ ವಿರುದ್ಧ  ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಈಗ ರಾಜ್ಯಪಾಲರ ವಿರುದ್ಧ ಅಲ್ಲಲ್ಲಿ ಪ್ರತಿಭಟನೆ  ಆರಂಭವಾಗಿದೆ.

ಕೋರ್ಟ್‌ನಲ್ಲಿ ತನಿಖೆಗೆ ಆದೇಶ ಸಿಕ್ರೆ ತಕ್ಷಣ ಸಿದ್ದರಾಮಯ್ಯ ವಿರುದ್ದ ಎಫ್ಐಆರ್! ಸಿಎಂಗೆ ದೂರುದಾರರ ಚೆಕ್‌ ಮೇಟ್‌

 ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಅನುಮತಿ ಕೊಟ್ಟಿದ್ದಕ್ಕೆ ರಾಜ್ಯಪಾಲರ‌ ವಿರುದ್ಧ ಕುರುಬ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಮಧ್ಯಾಹ್ನ ಗಾಂಧಿನಗರದಲ್ಲಿ ಪ್ರತಿಭಟನೆಗೆ ನಿರ್ಧಾರ ತೆಗೆದುಕೊಂಡಿದೆ. ಕುರುಬರ ಸಂಘದ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ.

ಇನ್ನು  ಸಿಎಂ ತವರು ಮೈಸೂರಿನಲ್ಲಿ ಕೂಡ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಹಾಗೂ ಕೈಗೊಂಬೆ ಎಂದು ಘೋಷಣೆ ಕೂಗಲಾಗುತ್ತಿದೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ ಶಿವರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರಿನ ನ್ಯಾಯಾಲಯದ ಮುಂಭಾಗ  ಸೇರಿರುವ ಪ್ರತಿಭಟನಾಕಾರರು ಮೋದಿ ಸೇವಕರಂತೆ ರಾಜ್ಯಪಾಲರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಪಟ್ಟುಬಿಡದೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಸ್ಥಳದಲ್ಲಿ ಮಾನವ ಸರಪಳಿ ರಚನೆ ಮಾಡಿ ಅಂಗಿ ಬಿಚ್ಚಿ ಅರೆಬೆತ್ತಲೆಯಾಗಿ‌‌ ಪ್ರತಿಭಟನೆ ಮಾಡುತ್ತಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ತುರ್ತು ಸಚಿವ ಸಂಪುಟ ಸಭೆ ರದ್ದು, ನಿವಾಸಕ್ಕೆ ಸಚಿವರ ದೌಡು 

ಚಿಕ್ಕಮಗಳೂರಿನಲ್ಲೂ ಪ್ರತಿಭಟನೆ:
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆ ತರೀಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯಪಾಲರು ಹಾಗು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತರೀಕೆರೆ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಟ್ಟಣದ ಗಾಂಧಿ ವೃತದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಸಿಎಂ ವಿರುದ್ಧ ಇದು ಷಡ್ಯಂತರದ ಪ್ರಕರಣ ಎಂದು ಪ್ರತಿಭಟನೆ ನಡೆಸಿದರು.

ಇನ್ನು ಇಷ್ಟೆಲ್ಲ ಟೆಕ್ಷನ್ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಹಿನ್ನಲೆ ಸರ್ಕಾರಿ ನೌಕರರ ಸಂಘದ ವತಿಯಿಂದ ನಮ್ಮಭಿಮಾನದ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವೇದಿಕೆ ಆಗಮಿಸುತ್ತಿದ್ದಂತೆಯೇ ಹೌದು ಹುಲಿಯಾ ಎಂದು ಘೋಷಣೆ ಕೂಗಿದ ನೌಕರರು, ನಗ್ಗುತ್ತಲೇ ಸಿಎಂ ಸಿದ್ದರಾಮಯ್ಯ  ವೇದಿಕೆ ಹತ್ತಿದರು.

Latest Videos
Follow Us:
Download App:
  • android
  • ios