Asianet Suvarna News Asianet Suvarna News

ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಮನವಿ: ಸಿಎಂಗೆ ಸಚಿವ ನಿರಾಣಿ ಪತ್ರ

* ಯುವ ಜನಾಂಗಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಧ್ಯಯನಕ್ಕೆ ಅಗತ್ಯ
* ಜೂ.4 ರಂದು ಸರ್ಕಾರದ ವತಿಯಿಂದ ಜನ್ಮ ದಿನಾಚರಣೆ ಆಚರಿಸಲು ಒತ್ತಾಯ
* ಪಠ್ಯ ಪುಸ್ತಕಗಳಲ್ಲಿ ಅಧ್ಯಯನ ಸೇರ್ಪಡೆ ಮಾಡಲು ಕೋರಿಕೆ
 

Murugesh Nirani Letter to CM Yediyurappa for Build Nalwadi Krishna Raja Wadiyar Statue grg
Author
Bengaluru, First Published Jun 5, 2021, 12:52 PM IST | Last Updated Jun 5, 2021, 12:53 PM IST

ಬೆಂಗಳೂರು(ಜೂ.05):  ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ "ಹೊಸ ವ್ಯಾಖ್ಯಾನ" ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ‌ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ನಿರಾಣಿ ಅವರು, ಮುಂದಿನ ಯುವಜನಾಂಗಕ್ಕೆ ಇದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

Murugesh Nirani Letter to CM Yediyurappa for Build Nalwadi Krishna Raja Wadiyar Statue grg

'ಕೈಗಾರಿಕಾ ದಿನಾಚರಣೆ' ಆಚರಿಸಲು ಒತ್ತಾಯ

ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ‌ಪದವಿ ಕಾಲೇಜುಗಳ ಪಠ್ಯ ಪುಸ್ತಕದಲ್ಲಿ ಅವರ ಚರಿತ್ರೆಯನ್ನು ಆಳವಡಿಸಲು ಕ್ರಮಕೈಗೊಳ್ಳಬೇಕು. ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯನ್ನು “ಎಂಜಿನಿಯರ್ ‌ ದಿನಾಚರಣೆ” ಮಾಡಿದಂತೆ ಇನ್ನು ಮುಂದೆ ಜೂನ್ 4 ರಂದು “ನಾಲ್ವಡಿ ಕೃಷ್ಣರಾಜ ಒಡೆಯರ್ “ ಜನ್ಮ ‌ದಿನವನ್ನು ಸರ್ಕಾರದ ವತಿಯಿಂದ ಆಚರಿಸಬೇಕು. ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತರಾದ ಅವರ ಸರ್. ಎಂವಿ ದಿನಾಚರಣೆಯನ್ನು 'ಕೈಗಾರಿಕಾ ದಿನಾಚರಣೆ' ಎಂತಲೂ ಆಚರಿಸಲು ಸೂಕ್ತವಾದ ‌ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

ರಾಜ್ಯದಿಂದ ವಿದೇಶಕ್ಕೆ ಕಬ್ಬಿಣದ ಅದಿರು ರಫ್ತು: ಅವಕಾಶ ನೀಡುವಂತೆ ಸುಪ್ರೀಂಗೆ ಮೇಲ್ಮನವಿ

ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆ, ಪಠ್ಯ ಪುಸ್ತಕಗಳಲ್ಲಿ ಜೀವನ ಚರಿತ್ರೆ ಅಳವಡಿಕೆ,  ಕೈಗಾರಿಕಾ  ಹಾಗೂ ಪ್ರತಿ ವರ್ಷ ಜೂ.4 ರಂದು ಜ‌ನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದಲೇ ಆಚರಣೆ ಮಾಡುವಂತೆ ಸಚಿವ ಮುರುಗೇಶ್ ನಿರಾಣಿ ಕೋರಿದ್ದಾರೆ.

ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ‌ಅವರ ಪ್ರತಿಮೆಯನ್ನು ನಿರ್ಮಿಸಿರುವುದರಿಂದ ದೇಶ - ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಅವರ ವ್ಯಕಿತ್ವವನ್ನು ಪರಿಚಯಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆ ಪ್ರಾರಂಭಿಸಿದ ಸರ್‌ಎಂವಿ 

ಇವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆ. 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಅವರ ಮತ್ತೊಂದು ಮಹತ್ತರ ಸಾಧನೆ ಎಂದರೆ, ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದು ಒಡೆಯರ್ ಅವರ ಮತ್ತೊಂದು ಮೈಲಿಗಲ್ಲು ಎಂದು ನಿರಾಣಿ ಅವರು ಬಣ್ಣಿಸಿದ್ದಾರೆ.

Murugesh Nirani Letter to CM Yediyurappa for Build Nalwadi Krishna Raja Wadiyar Statue grg

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು. ಬೆಂಗಳೂರಿನ ಮಿಂಟೋ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ನಿರಾಣಿ ಮನವಿ ಮಾಡಿದ್ದಾರೆ.
 

Latest Videos
Follow Us:
Download App:
  • android
  • ios