Asianet Suvarna News Asianet Suvarna News

ಖ್ಯಾತ ಬಾಲಿವುಡ್ ಗಾಯಕನ ಜಮೀನು ಕಬಳಿಸಿದ ಆರೋಪ, ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬಾಲಿವುಡ್ ಖ್ಯಾತ ಗಾಯಕ ಹಾಗೂ ನಟ ಲಕ್ಕಿ ಅಲಿ  ತಮ್ಮ ಬೆಂಗಳೂರಿನ ಜಮೀನನ್ನು ಭೂ ಮಾಫಿಯಾ ಮೂಲಕ  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ  ಒತ್ತುವರಿ ಮಾಡಿಕೊಂಡಿದ್ದಾರೆಂದು  ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

Musician Lucky Ali complaint  against IAS officer Rohini Sindhuri over His bengaluru land grab gow
Author
First Published Jun 21, 2024, 5:24 PM IST | Last Updated Jun 21, 2024, 5:24 PM IST

ಬೆಂಗಳೂರು (ಜೂ.21): ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿರುವ ಆರೋಪವನ್ನು ರೋಹಿಣಿ ಸಿಂಧೂರಿ ವಿರುದ್ಧ ಹೊರಿಸಿದ್ದಾರೆ. 

ಯಲಹಂಕ ನ್ಯೂಟೌನ್ ಬಳಿ ಜಮೀನನ್ನು ರೋಹಿಣಿ ಒತ್ತುವರಿ ಮಾಡಿದ ಆರೋಪ ಇದ್ದು, ಈ ಬಗ್ಗೆ ದೂರು ನೀಡಿದ ಅಲಿ X ಖಾತೆಯಲ್ಲಿ  ದೂರಿನ ಪ್ರತಿ ಅಪ್ಲೋಡ್ ಮಾಡಿದ್ದಾರೆ. ರೋಹಿಣಿ ಸಿಂಧೂರಿ, ಪತಿ ಸುಧೀರ್ ರೆಡ್ಡಿ, ಭಾಮೈದ ಮಧುಸೂಧನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ.

ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್!

ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಜಾಗವನ್ನು ಲಪಟಾಯಿಸಿದ್ದಾರೆಂದು ದೂರಿನಲ್ಲಿ ಅಲಿ ಉಲ್ಲೇಖಿಸಿದ್ದಾರೆ. ಮಾತ್ರವಲ್ಲ ಈ ಭೂ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ. 2022ರಲ್ಲಿ ಲಕ್ಕಿ ಅಲಿ ಈ ಸಂಬಂಧ ಯಲಹಂಕ ನ್ಯೂಟೌನ್ ಠಾಣೆಗೆ ದೂರು ನೀಡಿದ್ರು, ಈಗ ಲೋಕಾಯುಕ್ತಕ್ಕೆ‌ ಕೊಟ್ಟ ದೂರನ್ನ ಡಿಜಿ/ಐಜಿಪಿಗೆ ಟ್ಯಾಗ್ ಮಾಡಿದ್ದಾರೆ.

ವಿಚ್ಚೇದನ ಪಡೆದು 7ವರ್ಷ ದೂರಾಗಿ ಮರುಮದುವೆಯಾದ ಖ್ಯಾತ ನಿರ್ಮಾಪಕ, ಈಗ ಪ ...

2022ರಲ್ಲಿ ದೂರು ನೀಡಿದ್ದ ಅಲಿ: 2022ರಲ್ಲಿ ಅಂದಿನ ಡಿಜಿಪಿ ಆಗಿದ್ದ ಪ್ರವೀಣ್ ಸೂದ್ ಅವರಿಗೆ ಸರಣಿ ಟ್ವೀಟ್‌ ಮಾಡಿ, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು. 2012ರಿಂದಲೂ ಈ ಜಾಗದ ವಿಚಾರಕ್ಕೆ ಎರಡು ತಂಡಗಳ ನಡುವೆ ವ್ಯಾಜ್ಯ ನಡೆಯುತ್ತಿದೆ.

Latest Videos
Follow Us:
Download App:
  • android
  • ios