Asianet Suvarna News Asianet Suvarna News

SSLC ಪರೀಕ್ಷಾ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣ ಟ್ವೀಟ್;  ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR!

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ. 

Muslim appeasement tweet case FIR against Chakravarthy sulibele at jayanagar bengaluru rav
Author
First Published Feb 9, 2024, 2:26 PM IST

ಶಿವಮೊಗ್ಗ (ಫೆ.9): ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ. 

ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ(SSLC exam time table) ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ NSUI ಸದಸ್ಯರು ದೂರು ನೀಡಿದ್ದರು. 

 

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ; ತಿರುಗಿಬಿದ್ದ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು!

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಸಮಯಾವಕಾಶ ನೀಡಲು ಬೆಳಗ್ಗಿನ ಪರೀಕ್ಷೆಗಳನ್ನು ಮಧ್ಯಾಹ್ನದ ನಂತರ ನಿಗದಿ ಮಾಡಲಾಗಿದೆ. ಪರೀಕ್ಷಾ ವೇಳಾಪಟ್ಟಿ ಹಂಚಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ, ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗಿನ ಅವಧಿಯಲ್ಲಿ ನಡೆಯಲಿದೆ. ಶುಕ್ರವಾರ ಮಾತ್ರ ಏಕೆ ಮಧ್ಯಾಹ್ನದ ನಂತರ ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮಾಜ್​ಗೆ ಸಮಯವೇ ಎಂದು ಪ್ರಶ್ನಿಸಿದ್ದರು.

ಬೆಳಗ್ಗೆ ನಮಾಜ್‌ಗೆ ಅನುಕೂಲವಾಗುವಂತೆ SSLC ವೇಳಾಪಟ್ಟಿ ಬದಲಿಸಿದ ಶಿಕ್ಷಣ ಇಲಾಖೆ: ಮುಸ್ಲಿಂ ತುಷ್ಟೀಕರಣ ಬಗ್ಗೆ ಗಂಭೀರ ಆರೋಪ!

ಪರೀಕ್ಷಾ ಮಂಡಳಿ ಏನು ಹೇಳಿದೆ?: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ, ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್​ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಎಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಸ್ಪಷ್ಟನೆ ನೀಡಿತ್ತು.

Follow Us:
Download App:
  • android
  • ios