ಮತ್ತೊಂದು ಪ.ಬಂಗಾಳವಾಯ್ತಾ ಕರ್ನಾಟಕ ? ಕರ್ತವ್ಯನಿರತ ವೈದ್ಯನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ!
ರೋಗಿಯ ಸಂಬಂಧಿಕರಿಗೆ ನಿಂದಿಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಸರ್ಕಾರಿ ಜಿಲ್ಲಾ ಆಸ್ಪತ್ರೆ ಮೂಳೆ ತಜ್ಞರೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಕೊರಳು ಪಟ್ಟಿ ಹಿಡಿದು ಜಗ್ಗಾಡಿದ ಘಟನೆ ನಡೆದಿದೆ.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು (ಸೆ.10) : ರೋಗಿಯ ಸಂಬಂಧಿಕರಿಗೆ ನಿಂದಿಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಸರ್ಕಾರಿ ಜಿಲ್ಲಾ ಆಸ್ಪತ್ರೆ ಮೂಳೆ ತಜ್ಞರೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಕೊರಳು ಪಟ್ಟಿ ಹಿಡಿದು ಜಗ್ಗಾಡಿದ ಘಟನೆ ನಡೆದಿದೆ.
ನಗರದ ಸರ್ಕಾರಿ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಸಹೋದರಿಗೆ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಳೆ ತಜ್ಞ, ಹಿರಿಯ ವೈದ್ಯ ವೆಂಕಟೇಶ್ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮಹಿಳೆ ಮೇಲಿನ ಹಲ್ಲೆ ಖಂಡಿಸಿ ಆಸ್ಪತ್ರೆಯ ಮುಂಭಾಗ ಸಿಬ್ಬಂದಿ ಓಪಿಡಿ ಬಂದ್ ಮಾಡಿ ಸೂಕ್ತ ರಕ್ಷಣೆ ನೀಡುವಂತೆ ಪ್ರತಿಭಟನೆ ನಡೆಸಿದ್ದಾರೆ.
ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ :
ಜಿಲ್ಲಾಸ್ಪತ್ರೆ ವೈದ್ಯರ ಕೊಠಡಿಯೊಳಗೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ವೈದ್ಯರ ಮೇಲೆನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ ಸಿಬ್ಬಂದಿಗಳು ಹಲ್ಲೆಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಮೂಳೆ ತಜ್ಞ ವೆಂಕಟೇಶ್ ಶರ್ಟ್ ಹಿಡಿದು, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ ಮಹಿಳೆ ರಂಪಾಟ ಮಾಡಿದ್ದಾಳೆ.
ಸಬ್ ಇನ್ಸ್‌ಪೆಕ್ಟರ್‌ರಿಂದಲೇ ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ: ಮತ್ತೊಂದೆಡೆ ಬಾಗಿಣ ನೀಡಿ ಸೋದರತ್ವ ಭಾವನೆ
2 ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ಬಂದಿದ್ದ ಯುವಕನಿಗೆ ಚಿಕಿತ್ಸೆ ನೀಡುವ ಸಮಯದಲ್ಲಿ ರೋಗಿಗೆ ರೋಗಿಯ ಅಕ್ಕ ನೀರಿನ ಬಾಟಲಿ ನೀಡಲು ಬಂದಾಗ ವೈದ್ಯ ವೆಂಕಟೇಶ್ ರೋಗಿ ಅಕ್ಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಸಿಟ್ಟಾದ ರೋಗಿಯ ಅಕ್ಕ ವೈದ್ಯನ ಮೇಲೆ ಹಲ್ಲೆ ಮಾಡಿದ್ದಾರೆ.
ವೈದ್ಯರ ಮೇಲಿನ ಹಲ್ಲೆ ಘಟನೆ ಖಂಡಿಸಿ ಜಿಲ್ಲಾಸ್ಪತ್ರೆಯ ಸಿಬ್ಬಂದಿ ನ್ಯಾಯ ಕೊಡಿಸುವಂತೆ ಆಸ್ಪತ್ರೆ ಸಿಬ್ಬಂದಿ ಅಗ್ರಹಿಸಿದ್ದಾರೆ. ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ ಕೆಲಕಾಲ ಪ್ರಕ್ಷಬ್ದ ವಾತಾವರಣ ನಿರ್ಮಾಣವಾಗಿತ್ತು. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾಸ್ಪತ್ರೆ ಸರ್ಜನ್ ಮೋಹನ್ ಎಸ್ಪಿ ಕಚೇರಿಗೆ ತೆರಳಿ ಎಸ್ಪಿಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಮರ್ಪಕ ಪೊಲೀಸ್ ಸಿಬ್ಬಂದಿ ಇಲ್ಲದಿರೋದು ಇಂತಹಾ ಘಟನೆಗೆ ಕಾರಣವಾಗಿದೆ. ಜಿಲ್ಲಾಸ್ಪತ್ರೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನ ಹಾಕುವಂತೆ ಮನವಿ ಮಾಡಿದ್ದಾರೆ.
ನಗರಠಾಣೆ ಮುಂದೆ ಪ್ರತಿಭಟನೆ :
ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಆಸ್ಪತ್ರೆ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ದಿಢೀರ್ ಯಾಗಿ ಪೊಲೀಸ್ ಠಾಣೆ ಎದುರು ಶಿಫ್ಟ್ ಆಯಿತು. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ನೂರಾರು ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಟೋ ಚಾಲಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಭಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಾಥ್ ನೀಡಿದರು.
ಕನ್ನಡ ಚಿತ್ರರಂಗವಾಯ್ತು, ಇದೀಗ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ!
ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಆರೋಗ್ಯ ಇಲಾಖೆ ಸಿಬ್ಬಂದಿಗೆ ನಗರದ ವಿವಿಧ ಸಂಘಟನೆಗಳು ಸಾಥ್ ನೀಡಿದರು. ಆಟೋ ಚಾಲಕರ ಸಂಘ, ಕರವೇ, ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರೊಟೆಸ್ಟ್ ನಡೆಸಿದ್ದು ಕೂಡಲೇ ಹಲ್ಲೆ ಕೋರರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ನಗರ ಪೊಲೀಸ್ ಠಾಣೆ ಮುಂಭಾಗ ಘೋಷಣೆ ಕೂಗುತ್ತಿರುವ ಆರೋಗ್ಯ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು.