Asianet Suvarna News Asianet Suvarna News

ಪ್ರವಾದಿ ನಿಂದನೆ ವಿರುದ್ಧ ಕರ್ನಾಟಕದಲ್ಲೂ ತೀವ್ರ ಆಕ್ರೋಶ: ಬಿಗು ವಾತಾವರಣ

ಇತ್ತೀಚೆಗೆ ಮಾಧ್ಯಮ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ನೂಪುರ್‌ ಶರ್ಮಾ, ನವೀನ್‌ ಜಿಂದಾಲ್‌ ಮತ್ತು ರಾಜಾ ಸಿಂಗ್‌ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರಾಜ್ಯದ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

muslims protest in several places against remarks on their prophe gvd
Author
Bangalore, First Published Jun 11, 2022, 3:00 AM IST

ಬೆಂಗಳೂರು (ಜೂ.11): ಇತ್ತೀಚೆಗೆ ಮಾಧ್ಯಮ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ನೂಪುರ್‌ ಶರ್ಮಾ, ನವೀನ್‌ ಜಿಂದಾಲ್‌ ಮತ್ತು ರಾಜಾ ಸಿಂಗ್‌ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರಾಜ್ಯದ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಪ್ರವಾದಿ ಮೊಹಮ್ಮದ್‌ ಅವರನ್ನು ನಿಂದಿಸಿದವರನ್ನು ಬಂಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಬೇಕೇಂದು ಆಗ್ರಹಿಸಿ ಸೋಶಿಯಲ್‌ ಡೆಮೆಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ(ಎಸ್‌ಡಿಪಿಐ) ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ಹೊಸಪೇಟೆ, ಪುತ್ತೂರು ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ, ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ನೆಲ ಹಿಂದೂಗಳಿಗೆ ಸೇರಿದ್ದು, ಸನಾತನ ಧರ್ಮ ಮಾತ್ರವೇ ಇಲ್ಲಿ ಉಳಿಯೋದು!

ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಕೂಡಲೇ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ… ಅವರನ್ನು ಬಂಧಿಸಬೇಕು. ಅಲ್ಲದೇ ದೇಶದ ಘನತೆಯನ್ನು ಕಳೆದ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿದರು. ವಿಶ್ವಶಾಂತಿಪ್ರಿಯರಾದ ಪ್ರವಾದಿ ಮೊಹಮ್ಮದ್‌ ಪೈಗಂಬರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ರಾಷ್ಟ್ರೀಯ ಸೌಹಾರ್ದತೆ, ಐಕ್ಯತೆ ಹಾಗೂ ಶಾಂತಿಯನ್ನು ಭಂಗಮಾಡಿ ಕೋಮುಗಲಭೆ ಎಬ್ಬಿಸುವ ಉದ್ದೇಶದಿಂದ ಈ ರೀತಿ ನಿಂದಿಸಲಾಗಿದೆ ಎಂದು ಆರೋಪಿಸಿದರು.

ಪ್ರತಿಕೃತಿ ನೇಣಿಗೆ: ಬೆಳಗಾವಿ ನಗರದ ಪೋರ್ಚ್‌ ರಸ್ತೆಯಲ್ಲಿ ನೂಪುರ್‌ ಶರ್ಮಾ ಅವರ ಅಣಕು ಪ್ರತಿಕೃತಿಯನ್ನು ಅವರ ಭಾವಚಿತ್ರದ ಸಮೇತ ಗುರುವಾರ ತಡರಾತ್ರಿ ಗಲ್ಲಿಗೇರಿಸಿದಂತೆ ನೇತು ಹಾಕಲಾಗಿತ್ತು. ಶುಕ್ರವಾರ ಬೆಳಗ್ಗೆ ಇದನ್ನು ಕಂಡ ಹಿಂದೂಪರ ಸಂಘಟನೆ ಕಾರ್ಯಕರ್ತರು, ಕೆಲ ಪಾಲಿಕೆ ಸದಸ್ಯರು ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಹೆಚ್ಚು ಜನ ಜಮಾಯಿಸಿದ್ದರಿಂದ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಈ ಪ್ರತಿಕೃತಿಯನ್ನು ತಕ್ಷಣ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ಅದನ್ನು ತೆರವು ಮಾಡಬೇಕಾಗುತ್ತದೆ. ಹೊಸ ವಿವಾದಕ್ಕೆ ಅವಕಾಶ ಕೊಡಬಾರದು ಎಂದು ಕೆಲ ಮುಖಂಡರು ಆಗ್ರಹಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಮಾರ್ಕೆಟ್‌ ಠಾಣೆ ಪೊಲೀಸರು ಪ್ರತಿಕೃತಿ ತೆರವು ಮಾಡಿದರು.

ಇನ್ನು ಕಲಬುರಗಿಯಲ್ಲಿ ರಾಜಾ ಅಕಾಡೆಮಿ ನೇತೃತ್ವದಲ್ಲಿ ನೂರಾರು ಮುಸ್ಲಿಂಮರು ಮುಸ್ಲಿಂ ಚೌಕ್‌ನಲ್ಲಿ ಬಹಿರಂಗ ಸಭೆ ನಡೆಸಿ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ಮೂವರು ಮುಖಂಡರ ವಿರುದ್ಧ ಜಿಲ್ಲಾಧಿಕಾರಿ ಮತ್ತು ನಗರ ಪೊಲೀಸ್‌ ಕಮೀಷನರ್‌ಗೆ ಮನವಿ ಸಲ್ಲಿಸಿದರು. ಅದೇ ರೀತಿ ಯಾದಗಿರಿ ಜಿಲ್ಲೆಯ ಶಹಾಪುರದ ತಹಸೀಲ್‌ ಕಚೇರಿ ಮುಂದೆ ಲ್ಲಿ ಮುಸ್ಲಿಂ ಒಕ್ಕೂಟದ ವತಿಯಿಂದ ಭಾರೀ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಶಿವಮೊಗ್ಗದ ಮರ್ಕಾಜ್ಹಿ ಸುನ್ನಿ ಜಮೈತುಲ್‌ ಉಲ್ಮ ಸಮಿತಿ ಹಾಗೂ ಸುನ್ನಿ ಜಾಮೀಯಾ ಮಸ್ಜಿದ್‌ ಕಮಿಟಿ ವತಿಯಿಂದ ಈದ್ಗಾ ಮೈದಾನದಲ್ಲಿ ಸಂಜೆ ಬೃಹತ್‌ ಪ್ರತಿಭಟನೆ ನಡೆಯಿತು.

ನೂಪುರ್ ಶರ್ಮಾ ಪ್ರತಿಕೃತಿ ನಡುರಸ್ತೆಯಲ್ಲೇ ನೇತು ಹಾಕಿದ ಕಿಡಿಗೇಡಿಗಳು: ಹಿಂದೂಪರ ಸಂಘಟನೆಗಳ ಆಕ್ರೋಶ

ಪುತ್ತೂರಿನಲ್ಲಿ ಶುಕ್ರವಾರ ಜುಮಾ ನಮಾಝ್‌ ಬಳಿಕ ಸಂಪ್ಯ ಮುಹಿಯದ್ದೀನ್‌ ಜುಮ್ಮಾ ಮಸೀದಿ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಚಿತ್ರದುರ್ಗದಲ್ಲಿ ಅಖಿಲ ಕರ್ನಾಟಕ ಜನಸೇವಾ ಸಂಘ ಅಗ್ರಿಕಲ್ಚರಲ್‌ ಡೆವಲಪ್‌ಮೆಂಟ್‌ ಇಂಡಸ್ಟ್ರಿಸ್‌ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನುಳಿದಂತೆ ಮೈಸೂರು, ಹೊಸಪೇಟೆ, ಚಾಮರಾಜನಗರ, ರಾಮನಗರಗಳಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಡಳಿತಾರೂಢ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow Us:
Download App:
  • android
  • ios