'ಇಟ್ಟ ರಾಮನ ಬಾಣ ಹುಸಿಯಿಲ್ಲ; ಸರ್ವರು ಎಚ್ಚರದಿಂದಿರಬೇಕು ಪರಾಕ್' ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ
'ಇಟ್ಟ ರಾಮನ ಬಾಣ ಹುಸಿಯಿಲ್ಲ.ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದ ಇರಬೇಕು ಪರಾಕ್' ಎಂದು ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ.
ಚಿಕ್ಕಮಗಳೂರು (ಅ.25): 'ಇಟ್ಟ ರಾಮನ ಬಾಣ ಹುಸಿಯಿಲ್ಲ.ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದ ಇರಬೇಕು ಪರಾಕ್' ಎಂದು ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಮಹಾನವಮಿ ಬಯಲಿನಲ್ಲಿ ದಶರಥ ಪೂಜಾರ್ ಅವ್ರಿಂದ ಇಂದು ಮುಂಜಾನೆ 4.42ಕ್ಕೆ ಹೊರ ಬಿದ್ದ ಕಾರ್ಣಿಕದ ನುಡಿ. ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆಯಿತು. ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಭಾರತೀಯರು ಕಾರ್ಣಿಕದ ನುಡಿಯಂತೆ ನಡೆದಿರುವ ಘಟನೆ.
'ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್': ದೇವರಗುಡ್ಡ ಕಾರ್ಣಿಕ
ಕಾರ್ಣಿಕ ನುಡಿದಿರುವ ಭವಷ್ಯವಾಣಿ, ಎಚ್ಚರಿಕೆ ಯಾವುದಕ್ಕೆ ಸಂಬಂಧಿಸಿದ್ದು ಎಂದು ಭಕ್ತರು ತಲೆಕೆಡಿಸಿಕೊಂಡಿದ್ದಾರೆ. ಇತ್ತೀಚೆಗೆ ದೇಶಾದ್ಯಂತ ಗಲಭೆಗಳಾಗುತ್ತಿರುವುದರ ಹಿನ್ನೆಲೆ ಸೂಚನೆಯೇ? ಇಸ್ರೇಲ್ ಪ್ಯಾಲೆಸ್ತೀನ್ ನಡುವಿನ ಯುದ್ಧದಲ್ಲಿ ಭಾರತಕ್ಕೆ ಅಪಾಯದ ಎದುರಿಸುವುದರ ಸೂಚನೆಯೇ ಎಂಬ ಬಗ್ಗೆ ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.