ಮೈಸೂರು[ನ.18]: ಮದುವೆ ಕಾರ್ಯಕ್ರಮವೊಂದರಲ್ಲಿ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಭಾನುವಾರ ರಾತ್ರಿ ಮಟನ್ ಕತ್ತರಿಸುವ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರ ಗಾಯಗೊಂಡಿದ್ದ ಶಾಸಕರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮುಂದಿನ 48 ಗಂಟೆಯವರೆಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

"

ಶಾಸಕ ತನ್ವೀರ್ ಸೇಠ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ತನ್ವೀರ್ ಸೇಠ್ ಅವರು ಭಾನುವಾರ ರಾತ್ರಿ ಸಂಬಂಧಿಕರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರು ನಗರದ ಬನ್ನಿಮಂಟಪ ಸಮೀಪದ ಪಾರ್ಟಿ ಹಾಲ್‌ಗೆ ತೆರಳಿದ್ದರು. ಸುಮಾರು ರಾತ್ರಿ 11.30ರ ವೇಳೆಗೆ ಫರಾನ್ ಪಾಶಾ (25) ಎಂಬ ವ್ಯಕ್ತಿ ಏಕಾಏಕಿ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದ. ತಕ್ಷಣವೇ ಬೆಂಬಲಿಗರು ಶಾಸಕರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೀಗ ಅವರ ಸ್ಥಿತಿ ಗಂಭೀರವಿದೆ ಎಂದು ವೈದ್ಯರು ತಿಳಿಸಿದ್ದಾರೆ.

'ತನ್ವೀರ್ ಆರೋಗ್ಯದ ಬಗ್ಗೆ 48 ಗಂಟೆ ಏನನ್ನೂ ಹೇಳಲಾಗದು. ಮಚ್ಚಿನೇಟಿಗೆ ಮೆದುಳು, ಹೃದಯಕ್ಕೆ ಸಂಬಂಧಿಸಿದ ಕುತ್ತಿಗೆಯ ರಕ್ತನಾಳ, ನರಗಳು ಡ್ಯಾಮೇಜ್ ಆಗಿವೆ. ಕಿಡ್ನಿ ಸ್ವಲ್ಪ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬಿಪಿ, ಶುಗರ್ ಸಾಮಾನ್ಯ ಸ್ಥಿತಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಎಲ್ಲ ರೀತಿಯ ಚಿಕಿತ್ಸೆಗೆ ತಜ್ವೀರ್ ಸ್ಪಂದಿಸುತ್ತಿದ್ದಾರೆ' ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಡಾ.ಉಪೇಂದ್ರ ಶೆಣೈ ತಿಳಿಸಿದ್ದಾರೆ. 

'ತನ್ವೀರ್‌ ಸೇಠ್‌ನಿಂದ ಯಾವುದೇ ಅನುಕೂಲ‌ ಆಗ್ತಿಲ್ಲ, ಅದಕ್ಕೆ ಕೊಲೆ ಯತ್ನ'..!

ಇನ್ನು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಿದ್ದಾರೆ. 

ಆರೋಪಿ ಹೇಳಿದ್ದೇನು?

ತನ್ವೀರ್ ಸೇಠ್ ಮೇಲೆ ಅಸಮಾಧಾನದಿಂದ ದಾಳಿ ಮಾಡಿದ್ದಾಗಿ ಆರೋಪಿ ಹೇಳುತ್ತಿದ್ದು, ಶಾಶಕರಿಂದ ಯಾರಿಗೂ ಯಾವುದೇ ಅನುಕೂಲ‌ ಆಗುತ್ತಿಲ್ಲ. ಅವರು ಏನೂ ಮಾಡುತ್ತಿಲ್ಲ, ಹೀಗಾಗಿ ಕೊಲೆ ಯತ್ನ ಮಾಡಿದೆ ಎಂದು ಹೇಳಿದ್ದಾನೆ.

ಆರೋಪಿಯ ಹೇಳಿಕೆಗಳು ಸಾಕಷ್ಟು ಅನುಮಾನ ಹುಟ್ಟು ಹಾಕುತ್ತಿದ್ದು, ನಿಜವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿ ಸತ್ಯ ಬಾಯಿ ಬಿಡಿಸಲು ಪ್ರಯತ್ನಿಸುತ್ತಿದ್ದಾರೆ.

ನವೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: