Asianet Suvarna News Asianet Suvarna News

ನೇತ್ರಾವತಿ ಪೀಕ್ ಸ್ಪಾಟ್ ಚಾರಣ ಹೋಗಿದ್ದ ಮೈಸೂರು ಯುವಕ ಹೃದಯಘಾತದಿಂದ ಸಾವು

ಕುದುರೆಮುಖ -ನೇತ್ರಾವತಿ ಪೀಕ್ ಸ್ಪಾಟ್  ನಲ್ಲಿ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರು ಮೂಲದ ಏಳು ಯುವಕರ ತಂಡ ಚಾರಣ ಹೋಗಿತ್ತು.

Mysuru boy died due to heart attack at Netravati Peak spot while Trekking gow
Author
First Published Jun 30, 2023, 6:14 PM IST

ಚಿಕ್ಕಮಗಳೂರು (ಜೂ.30): ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ಇದ್ದು,  ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ  ಈ ಸ್ಥಳವಿದೆ. ಪೀಕ್ ನಿಂದ ಮೃತದೇಹವನ್ನ ಕಳಸಕ್ಕೆ ತಂದ ಕಳಸ ಪೊಲೀಸರು ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹೊಸಪೇಟೆ ಬಳಿ ಭೀಕರ ಅಪಘಾತ: ಬಳ್ಳಾರಿ ಕೌಲ್‌ಬಜಾರ್‌ನ ನಾಲ್ವರು ಸಾವು

ಪರಿಸರ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮೆ!
ಕಾರವಾರ: ಇನ್ನು ಮುಂದೆ ಕರ್ನಾಟಕ ಅರಣ್ಯ ಇಲಾಖೆ ಅಧೀನದಲ್ಲಿರುವ ರಾಜ್ಯದ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮೆ ಭದ್ರತೆ ಒದಗಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಈ ಕುರಿತು ಅವಶ್ಯಕ್ರಮ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರು ಹುಲಿ ಸಂರಕ್ಷಿತ ಪ್ರದೇಶಗಳ ನಿರ್ದೇಶಕರು, ವನ್ಯಜೀವಿ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಬುಧವಾರ ಪತ್ರ ಬರೆದಿದ್ದಾರೆ. ಬೆಳಗಾವಿಯ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ್‌ ಕುಲಕರ್ಣಿ ಮನವಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.

HSRP Scam: ಹಳಿ ತಪ್ಪಿದ ಅತೀ ಸುರಕ್ಷಾ ನೋಂದಣಿ ಫಲಕ ಯೋಜನೆ, ಏನಿದು

ಪರಿಸರ ಪ್ರವಾಸೋದ್ಯಮ ಸ್ಥಳಗಳಲ್ಲಿ ಚಾರಣ, ಹಿನ್ನೀರು ಸಫಾರಿ, ಕಯಾಕಿಂಗ್‌, ಬೋಟಿಂಗ್‌, ರಾರ‍ಯಪ್ಟಿಂಗ್‌ ಸೇರಿ ಹಲವು ಚಟುವಟಿಕೆಯನ್ನು ಪ್ರವಾಸಿಗರಿಗೆ ಒದಗಿಸಲಾಗುತ್ತಿದೆ. ಕೆಲ ಚಟುವಟಿಕೆ ನೀರಿನಲ್ಲಿ ಮುಳುಗುವಿಕೆ, ವನ್ಯಜೀವಿಗಳಿಂದ ದಾಳಿ ಸೇರಿ ಅನೇಕ ಅಪಾಯ ಹೊಂದಿದ್ದು, ಆಕಸ್ಮಿಕವಾಗಿ ಸಾವು ಅಥವಾ ಶಾಶ್ವತ ಅಂಗವೈಕಲ್ಯ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ವಿಮೆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ಸರ್ಕಾರದ ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಈಗಾಗಲೇ ತನ್ನ ಅಧೀನದಲ್ಲಿರುವ ಘಟಕಗಳಲ್ಲಿ ಈ ಸೌಲಭ್ಯ ಒದಗಿಸುತ್ತಿದೆ ಎಂದು ಹೇಳಿದರು.

ರಾಜ್ಯವು ಅಗಾಧವಾದ ವನ್ಯಜೀವಿ ಸಂಪತ್ತನ್ನು ಹೊಂದಿದ್ದು, ಹಲವು ಹುಲಿಸಂರಕ್ಷಿತ ಪ್ರದೇಶಗಳು, ರಾಷ್ಟ್ರೀಯ ಉದ್ಯಾನಗಳು ಹಾಗೂ ಅಭಯಾರಣ್ಯಗಳನ್ನು ಹೊಂದಿದೆ. ರಾಜ್ಯದ ಪ್ರಕೃತಿ ಸೌಂದರ್ಯ ಸಂರಕ್ಷಿತ ಪ್ರದೇಶಗಳ ಹೊರಗೂ ಹಬ್ಬಿದ್ದು ಹಲವು ಗಿರಿಧಾಮಗಳು, ಜಲಪಾತಗಳನ್ನು ಹೊಂದಿದ್ದು ತನ್ಮೂಲಕ ದೇಶದಲ್ಲೇ ಪರಿಸರ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ರಾಜ್ಯಗಳಲ್ಲೊಂದು. ಅಲ್ಲದೆ, ರಾಜ್ಯದ ಕರಾವಳಿಯೂ ಹಲವು ಸುಪ್ರಸಿದ್ಧ ತಾಣಗಳನ್ನು ಹೊಂದಿದೆ. ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ಇಲ್ಲಿ ವಿಪುಲ ಅವಕಾಶಗಳಿವೆ. 

Follow Us:
Download App:
  • android
  • ios